ಉಡುಪಿ: ಸಂಜೆಯ ಸೂರ್ಯಗ್ರಹಣ (Solar Eclipse) ಕಣ್ತುಂಬಿಕೊಳ್ಳಲು ಕರಾವಳಿ ಜನ ಸಿದ್ಧರಾಗುತ್ತಿದ್ದಾರೆ. ಆಶ್ವಯುಜ ಮಾಸದ ಅಂತ್ಯದಲ್ಲಿ ಬರುವ ಅಮಾವಾಸ್ಯೆ ಚಂದ್ರ, ಈ ವರ್ಷ ಅಕ್ಟೋಬರ್ 25ರಂದು ವರ್ಷದ 2ನೇ ಸೂರ್ಯಗ್ರಹಣವನ್ನು ತರುತ್ತಿದೆ.
ಸೂರ್ಯಗ್ರಹಣವೆಂದರೇನು? ಗ್ರಹಣ ಆಗೋದು ಹೇಗೆ? ಜನ ಏನ್ಮಾಡಬೇಕು? ಹೇಗೆ ಗ್ರಹಣ ನೋಡಬೇಕು ಅಂತ ಹಿರಿಯ ಭೌತಶಾಸ್ತ್ರಜ್ಞ ಉಡುಪಿಯ ಎ.ಪಿ ಭಟ್ (A.P.Bhat) ವಿವರಿಸಿದ್ದಾರೆ. ಚಂದ್ರನು ಸೂರ್ಯ ಮತ್ತು ಭೂಮಿಯ ನಡುವಿನಲ್ಲಿ ಬರುವ, ಇರುವ ಕಾಲವನ್ನು ಸೂರ್ಯಗ್ರಹಣ ಎಂದು ಕರೆಯುತ್ತೇವೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ
Advertisement
Advertisement
ಪ್ರತಿ ಅಮಾವಾಸ್ಯೆಯ ದಿನ ಚಂದ್ರನು ಭೂಮಿ ಮತ್ತು ಸೂರ್ಯನ ಮಧ್ಯೆ ಹಾದು ಹೋಗುವಾಗ, ಈ ಮೂರು ಆಕಾಶಕಾಯಗಳು ಒಂದು ಸರಳರೇಖೆಯಲ್ಲಿರುವುದಿಲ್ಲ. ಚಂದ್ರನ ಭೂಮಿಯ ಸುತ್ತ ಸುತ್ತುವ ಚಲನೆಯ ಸಮತಲ ಹಾಗೂ ಸೂರ್ಯನ ಸಮತಲ (ಭೂಮಿಯ ದೃಷ್ಟಿಯಿಂದ)ಗಳ ನಡುವಿನಲ್ಲಿ 5 ಡಿಗ್ರಿಗಳ ಅಂತರವಿರುವುದರಿಂದ ಪ್ರತಿ ಅಮಾವಾಸ್ಯೆಗೆ ಗ್ರಹಣ ಸಂಭಸುವುದಿಲ್ಲ. ಚಂದ್ರನು ರಾಹು ಅಥವಾ ಕೇತು ಬಿಂದುವಿನಲ್ಲಿ ಬಂದಾಗ ಮಾತ್ರ ಸೂರ್ಯಗ್ರಹಣ ಸಂಭವಿಸುತ್ತದೆ.
Advertisement
ಚಂದ್ರನು ಸೂರ್ಯನಿಗೆ ಅಡ್ಡ ಬಂದು, ಸೂರ್ಯನ ಒಂದು ಭಾಗವು ಮಾತ್ರ ಗೋಚರಿಸಿದರೆ, ಅದು ಪಾರ್ಶ್ವ ಸೂರ್ಯಗ್ರಹಣ ಆಗಿರುತ್ತದೆ. ಅದೇ ರೀತಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಿದರೆ ಅದು ಖಗ್ರಾಸ ಸೂರ್ಯಗ್ರಹಣ. ಅ.25ರ ಸೂರ್ಯಗ್ರಹಣವು ಗೋಚರಿಸುವ ಎಲ್ಲ ಪ್ರದೇಶಗಳಲ್ಲಿ ಪಾರ್ಶ್ವ ಸೂರ್ಯ ಗ್ರಹಣವಾಗಿರುತ್ತದೆ.
Advertisement
ಸಾಮಾನ್ಯವಾಗಿ ಪ್ರತಿ ಸೂರ್ಯಗ್ರಹಣದ ಮೊದಲು ಅಥವಾ ನಂತರ ಬರುವ ಹುಣ್ಣಿಮೆಯ ದಿನ ಚಂದ್ರಗ್ರಹಣ ಸಂಭವಿಸುತ್ತದೆ. ಈ ಬಾರಿ ಕೂಡ ನವೆಂಬರ್ 8ರಂದು ಚಂದ್ರಗ್ರಹಣವನ್ನು (ಚಂದ್ರ ಮತ್ತು ಸೂರ್ಯನ ಮಧ್ಯೆ ಭೂಮಿ ಬರುವ ಸಂದರ್ಭ) ನೋಡಬಹುದು. ಇದನ್ನೂ ಓದಿ: ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ
ಯಾವ ಪ್ರದೇಶಗಳಲ್ಲಿ ಗೋಚರ?
ಈ ಗ್ರಹಣವು ಭಾರತದ ಎಲ್ಲಾ ಪ್ರದೇಶಗಳಲ್ಲಿ ಹಾಗೂ ಯೂರೋಪ್ ಮತ್ತು ಏಷ್ಯಾದ ಮಧ್ಯಭಾಗದ ವಿವಿಧ ದೇಶಗಳಲ್ಲಿ ಗೋಚರಿಸುತ್ತದೆ. ರಷ್ಯಾದಲ್ಲಿ ಈ ಗ್ರಹಣವು ಗೋಚರಿಸುವಾಗ ಚಂದ್ರನು ಸೂರ್ಯನನ್ನು ಗರಿಷ್ಠ ಅಂದರೆ ಶೇ.82ರಷ್ಟನ್ನು ಆವರಿಸಿಕೊಂಡಿರುತ್ತಾನೆ. ಭಾರತದಲ್ಲಿ ಈ ಗ್ರಹಣವು ಉತ್ತರದ ಲೇಕ್‌ನಲ್ಲಿ ಶೇ.54ರಷ್ಟು ಹಾಗೂ ದೆಹಲಿಯಲ್ಲಿ ಶೇ.44ರಷ್ಟು ಸೂರ್ಯನನ್ನು ಆವರಿಸಿರುವುದು ಕಂಡು ಬರುತ್ತದೆ.
ಕರ್ನಾಟಕದಲ್ಲಿ ಎಲ್ಲಿಂದ ಗ್ರಹಣ ನೋಡಬಹುದು?
ಕರ್ನಾಟಕದ ಎಲ್ಲ ಭಾಗಗಳಿಂದ ಗ್ರಹಣವನ್ನು ನೋಡಬಹುದು. ರಾಜ್ಯದ ನಾನಾ ಸ್ಥಳಗಳಲ್ಲಿ ಈ ಗ್ರಹಣವು ಸಂಜೆ 5 ರಿಂದ 6 ಗಂಟೆಗೆ ನಡೆಯಲಿರುವ ಸೂರ್ಯಾಸ್ತದವರೆಗೂ ಗೋಚರಿಸುತ್ತದೆ. ಪಶ್ಚಿಮ ಮತ್ತು ನೈಋತ್ಯದ ಕಡೆ ಕ್ಷಿತಿಜವು ಗ್ರಹಣ ವೀಕ್ಷಿಸಲು ಉತ್ತಮ ಸ್ಥಳವಾಗಿರುತ್ತದೆ. ಸಮುದ್ರ ತೀರದಲ್ಲಿ ಗ್ರಹಣ ಬಹಳ ಚೆನ್ನಾಗಿ ಕಾಣುತ್ತದೆ.
ಬೆಂಗಳೂರಿನಲ್ಲಿ ಈ ಗ್ರಹಣ ಶೇ.10ರಷ್ಟು ಮಾತ್ರ ಕಂಡುಬರುತ್ತದೆ. ಸುಂದರ ಪ್ರಾಕೃತಿಕ ದೃಶ್ಯದೊಂದಿಗೆ ಕಡಲ ತೀರಕ್ಕೆ ಸಮೀಪವಿರುವ ಉಡುಪಿಯು ಈ ಗ್ರಹಣ ವೀಕ್ಷಿಸಲು ಉತ್ತಮ ಪ್ರದೇಶ. ಉಡುಪಿಯಲ್ಲಿ ಈ ಗ್ರಹಣವು ಸಂಜೆ 5.08ಕ್ಕೆ ಪ್ರಾರಂಭಗೊಂಡು 5:50ರ ಸುಮಾರಿಗೆ ಗರಿಷ್ಠ ಪ್ರಮಾಣದಲ್ಲಿ ಗೋಚರಿಸುತ್ತದೆ. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಕಾದು ನೋಡಿ: ಬೊಮ್ಮಾಯಿ
ಉಡುಪಿಯಲ್ಲಿ ಈ ಗ್ರಹಣವು ಮುಗಿಯುವ ಸಮಯ ಸಂಜೆ 6:28. ಆದರೆ ಅಂದಿನ ಸೂರ್ಯಾಸ್ತವು 6:06ಕ್ಕೆ ಆಗುವುದು. ಹೀಗಾಗಿ ಅ.25ರಂದು ಉಡುಪಿಯಲ್ಲಿ ಅಸ್ತಮಿಸುವ ಸೂರ್ಯನು ಗ್ರಹಣ ಹಿಡಿದ ಸೂರ್ಯನಾಗಿರುತ್ತಾನೆ. ಇದು ಒಂದು ಅಪರೂಪದ ವಿಶಿಷ್ಟ ದೃಶ್ಯವಾಗಿರುತ್ತದೆ.
ನೋಡುವುದು ಹೇಗೆ?: ಉಡುಪಿಯ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘವು (ಪಿಎಎಸಿ) ಪ್ರತಿ ಗ್ರಹಣದ ಸಮಯದಂತೆ ಈ ಬಾರಿಯ ಗ್ರಹಣವನ್ನು ಕೂಡ ವೀಕ್ಷಿಸಲು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಲ್ಪೆ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಅವಕಾಶ ಒದಗಿಸಲಿದೆ. ಆಸಕ್ತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಸಕ್ತ ಸಾರ್ವಜನಿಕರು ಈ ಗ್ರಹಣವನ್ನು ಮಲ್ಪೆ ಬೀಚ್‌ನಲ್ಲಿ ಸಂಜೆ 5:00ರಿಂದ ಸೂರ್ಯಾಸ್ತದವರೆಗೂ ನೋಡಬಹುದಾಗಿದೆ. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ
ಗ್ರಹಣವನ್ನು ಬರಿಗಣ್ಣಿನಲ್ಲಿ ನೋಡಬೇಡಿ… ಎಚ್ಚರಿಕೆ!
ಯಾರೂ ಸಹ ಯಾವುದೇ ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು. ಟೆಲಿಸ್ಕೋಪ್, ದುರ್ಬೀನ್, ಕ್ಯಾಮೆರಾಗಳಿಂದ ಕೂಡ ಸೂರ್ಯಗ್ರಹಣವನ್ನು ನೋಡುವುದು ಹಾನಿಕಾರಕ. ಸೂರ್ಯಗ್ರಹಣವನ್ನು ಯಾವಾಗಲೂ ವಿಶೇಷವಾದ ಗ್ರಹಣ ವೀಕ್ಷಣಾ ಕನ್ನಡಕಗಳಿಂದ ಮಾತ್ರ ನೋಡಬೇಕು. ಪಿನ್-ಹೋಲ್‌ಗಳ ಮೂಲಕ ಸೂರ್ಯನ ಪ್ರಕ್ಷೇಪಣವನ್ನು ಯಾವುದೇ ಹಾನಿಯಿಲ್ಲದೆ ನೋಡಬಹುದು. ಎಕ್ಸ್-ರೇ ಹಾಳೆಗಳಿಂದ ಕೂಡ ಗ್ರಹಣವನ್ನು ನೋಡಬಾರದು.