ಕೋಲಾರ: ಮೊಲ ನುಂಗಿ ಸುಸ್ತಾಗಿ ಪರದಾಡುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವೊಂದನ್ನ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಕುಪ್ಪಂ ತಾಲೂಕಿನ ಗುಡಿಪಲ್ಲಿ ಬಳಿ ಈ ಹೆಬ್ಬಾವು ಪತ್ತೆಯಾಗಿದ್ದು, ಮೊಲ ನುಂಗಿ ಸುಸ್ತಾಗಿ ಗಿಡಗಳ ಮಧ್ಯೆ ಅವಿತುಕೊಂಡಿತ್ತು. ಇದನ್ನು ಕಂಡ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಯವರು ಹೆಬ್ಬಾವನ್ನ ರಕ್ಷಣೆ ಮಾಡಿದ್ದಾರೆ.
Advertisement
Advertisement
10 ಅಡಿ ಉದ್ದದ ಹೆಬ್ಬಾವನ್ನ ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾದರು. ಬಳಿಕ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕೆಲ ಸ್ಥಳೀಯರು ಹಾವನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಗ್ರಾಮದ ಸಮೀಪ ಬಂದಿದ್ದ ಹೆಬ್ಬಾವನ್ನ ಹಿಡಿಯುತ್ತಿದ್ದಂತೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟರು. ಸ್ಥಳದಲ್ಲಿ ಹೆಬ್ಬಾವನ್ನ ನೋಡಲು ಆಗಮಿಸಿದ ಗ್ರಾಮದ ಜನರು ಹೆಬ್ಬಾವಿನೊಂದಿಗೆ ಫೋಟೋಗಳನ್ನ ಕ್ಲಿಕ್ಕಿಸಿಕೊಂಡರಲ್ಲದೇ, ತಮ್ಮ ಮೊಬೈಲ್‍ಗಳಲ್ಲಿ ವಿಡಿಯೋವನ್ನೂ ಕೂಡ ಸೆರೆಹಿಡಿದಿದ್ದಾರೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ಸುರಕ್ಷಿತವಾಗಿ ಚಿಕಟಪಲ್ಲಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.