ಚಿಕ್ಕಮಗಳೂರು: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ (Accident) 18 ಮಂದಿ ಗಾಯಗೊಂಡ ಘಟನೆ ಕಳಸ (Kalasa) ತಾಲೂಕಿನ ಬಾಳೆಖಾನ್ ಎಸ್ಟೇಟ್ ಬಳಿ ನಡೆದಿದೆ.
ಅಪಘಾತದಲ್ಲಿ 6 ಜನರಿಗೆ ಹೆಚ್ಚಿನ ಗಾಯವಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕಳಸದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಕಪ್‍ನಲ್ಲಿ 18 ಜನರನ್ನ ಕುರಿಗಳಂತೆ ತುಂಬಿಕೊಂಡು ಹೋದ ಚಾಲಕನ ವಿರುದ್ಧ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ. ಇದು ಕಾನೂನು ಬಾಹಿರ, ಆತನ ವಿರುದ್ಧ ಕ್ರಮಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.