ಭೀಕರ ರಸ್ತೆ ಅಪಘಾತ- 9 ಮಂದಿ ದುರ್ಮರಣ, 23 ಮಂದಿಗೆ ಗಾಯ

Public TV
1 Min Read
ACCIDENT

ರಾಯ್ಪುರ: ಛತ್ತೀಸ್‌ಗಢದ ಬೆಮೆತಾರಾದಲ್ಲಿ (Bemetara Accident) ಭಾನುವಾರ ತಡರಾತ್ರಿ ಭಾರೀ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 23 ಜನರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಲ್ಲಿ ಕೆಲವರನ್ನು ರಾಯ್‌ಪುರದ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದ ಗಾಯಾಳುಗಳಿಗೆ ಬೆಮೆತ್ರಾ ಮತ್ತು ಸಿಮ್ಗಾದ ಸಿಎಚ್‌ಸಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ ತಾಪಮಾನ

ಘಟನೆ ಬೆಮೆತಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಥಿಯಾ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಜನರಿಂದ ತುಂಬಿದ್ದ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪಿಕಪ್‌ನಲ್ಲಿದ್ದ ಎಲ್ಲರೂ ಕುಟುಂಬದ ಕಾರ್ಯಕ್ರಮಕ್ಕೆಂದು ಗ್ರಾಮದ ತಿರಯ್ಯಗೆ ತೆರಳಿ ಬಳಿಕ ಪಾರ್ಥರ ಗ್ರಾಮಕ್ಕೆ ಮರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆಗೆ ಎಸ್‌ಡಿಎಂ ಕೂಡ ಸ್ಥಳಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.

Share This Article