ಯಾದಗಿರಿ: ವಿದ್ಯುತ್ ಕಂಬಕ್ಕೆ (Electric Pole) ಬುಲೆರೋ ಪಿಕಪ್ (Pickup) ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು (Workers) ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಯಾದಗಿರಿ (Yadgir) ಜಿಲ್ಲೆಯ ಶಹಾಪುರ (Shahapur) ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ.
ಭಾಗ್ಯಶ್ರೀ (35), ಸತ್ಯಮ್ಮ (30), ಹೊನ್ನಿಂಗಮ್ಮ (18) ಮೃತ ಕಾರ್ಮಿಕರು. ಚಾಲಕನ ನಿಯಂತ್ರಣ ತಪ್ಪಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಜಿತ್ ದೋವಲ್ ಸೋಮವಾರ ಚೀನಾ ಭೇಟಿ; ಭಾರತ – ಚೀನಾ ಗಡಿ ಸಮಸ್ಯೆ ಕುರಿತು ಮಹತ್ವದ ಮಾತುಕತೆ
ಕಾರ್ಮಿಕರು ಬೆಳಗಿನ ಜಾವವೇ ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಶಿರಸಿಯಲ್ಲಿ 389 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

