ಕಲಬುರಗಿ: ಜಿಲ್ಲೆಯಾದ್ಯಂತ ಪ್ರಸಕ್ತ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ (Pigeon pea Crop) ಖರೀದಿ ಆರಂಭವಾಗಿದ್ದು, ಜಿಲ್ಲಾಯದ್ಯಂತ 177 ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ FAQ ಗುಣಮಟ್ಟದ 3,06,150 ಮೆಟ್ರಿಕ್ ಟನ್ ತೊಗರಿ ಖರೀದಿಗೆ ಸರ್ಕಾರ ಆದೇಶಿಸಿದೆ ಎಂದಿರುವ ಅವರು, ಜಿಲ್ಲೆಯಲ್ಲಿ ಈಗಾಗಲೆ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳಲ್ಲಿ ತೊಗರಿ ಖರೀದಿಗೆ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಖರೀದಿಗೆ 134 ಕೇಂದ್ರ ಮ್ಯಾಪಿಂಗ್ ಆಗಿದ್ದು, ಇನ್ನುಳಿದ 43 ಕೇಂದ್ರ ತುರ್ತಾಗಿ ಮ್ಯಾಪಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನ
ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಖರೀದಿಸಲಾಗುತ್ತದೆ. ಹಣವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವಿರುದ್ಧ ವಂಚನೆ ಆರೋಪ – ಕೋರ್ಟ್‌ನಿಂದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ಇನ್ನು ನ್ಯಾಫೆಡ್ ನಿಂದ ತೊಗರಿ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದ್ದು, ರೈತ ಬಾಂಧವರು ಇದರ ಲಾಭ ಪಡೆಯಬೇಕೆಂದು ಡಿಸಿ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗರ್ಭಿಣಿಯರ ಬೃಹತ್ ಆರೋಗ್ಯ ತಪಾಸಣಾ ಶಿಬಿರ – ಮಾತೃತ್ವ ಸುರಕ್ಷತಾ ಅಭಿಯಾನಕ್ಕೆ ಆರೋಗ್ಯ ಇಲಾಖೆ ಒತ್ತು