ನವದೆಹಲಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಭದ್ರತಾ ಪಡೆಗಳು ಸೆರೆಹಿಡಿದಿದ್ದಾರೆ.
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಚೀಟಿಯನ್ನು ಪಾರಿವಾಳ ಉಗುರುಗಳಿಗೆ ಕಟ್ಟಲಾಗಿತ್ತು. ಪತ್ರದಲ್ಲಿ ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶವಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ
ಪಾಕಿಸ್ತಾನವು ಭಾರತ ಗಡಿಭಾಗಕ್ಕೆ ವಿವಿಧ ಸಂದೇಶಗಳನ್ನು ಹೊತ್ತ ಬಲೂನ್, ಧ್ವಜಗಳು ಮತ್ತು ಪಾರಿವಾಳಗಳನ್ನು ಕಳುಹಿಸುತ್ತಿದೆ. ಆದರೆ ಬೆದರಿಕೆ ಪತ್ರವನ್ನು ಹೊತ್ತ ಪಾರಿವಾಳವನ್ನು ಸೆರೆಹಿಡಿಯುತ್ತಿರುವುದು ಇದೇ ಮೊದಲು ಎಂದಿದ್ದಾರೆ. ಹೀಗಾಗಿ ಭದ್ರತಾ ಸಂಸ್ಥೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿವೆ.
ಆ.18ರಂದು ಪಾಕಿಸ್ತಾನದಿಂದ ಬರುತ್ತಿದ್ದ ಪಾರಿವಾಳವನ್ನು ಅಂತಾರಾಷ್ಟ್ರೀಯ ಗಡಿಯ ಕಟ್ಮರಿಯಾ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ ಎನ್ನಲಾಗಿದೆ.ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ