ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ (High Court) ಜುಲೈ 6 ಕ್ಕೆ ನಿಗದಿಪಡಿಸಿದೆ.
ಪ್ರಕಾಶ್ ಬೆಳವಾಡಿ, ಡಾ. ಎ ರವೀಂದ್ರ, ಸಿಟಿಜನ್ ಆಕ್ಷನ್ ಫೋರಂ ಸಲ್ಲಿಸಿರುವ ಈ ಪಿಐಎಲ್ (PIL) ವಿಚಾರಣೆಯನ್ನು ಇಂದು ನಡೆಸಲಾಯಿತು.
ಲಾಲ್‌ಬಾಗ್‌ನಲ್ಲಿರುವ 5 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಇದು ಪಾರಂಪರಿಕ ತಾಣವಾಗಿರುವ ಲಾಲ್ ಬಾಗ್‌ಗೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.
ತಡೆಯಾಜ್ಞೆ ಕುರಿತ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಜುಲೈ 6ಕ್ಕೆ ನಿಗದಿಪಡಿಸಿದೆ.
