ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿದೆ.
ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
Advertisement
Advertisement
ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಆರಂಭದಲ್ಲೇ ಪ್ರಶ್ನಿಸಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತು.
Advertisement
Advertisement
ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಿದ್ದರೂ ಯಾಕೆ ಸುಮ್ಮನಿದ್ದೀರಿ. ಹೈಕೋರ್ಟ್ ಆದೇಶ ನೀಡುವವರೆಗೂ ನೀವು ಕ್ರಮ ಕೈಗೊಳ್ಳುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿತು.
ಕೋವಿಡ್ ಹೆಚ್ಚುತ್ತಿರುವ ನಡುವೆ ರ್ಯಾಲಿ ನಡೆಸುತ್ತಿದ್ದೀರಾ? ರ್‍ಯಾಲಿಗೆ ಮುನ್ನ ನೀವು ಅನುಮತಿ ಪಡೆದಿದ್ದೀರ ಎಂದು ಕೆಪಿಸಿಸಿಗೆ ಹೈಕೋರ್ಟ್ ಪ್ರಶ್ನೆ ಪ್ರಶ್ನೆ ಮಾಡಿ ಉತ್ತರ ನೀಡುವಂತೆ ಸೂಚಿಸಿದೆ.
ಸರ್ಕಾರದ ಪರವಾಗಿ ಹಾಜರಾರ ಎಎಜಿ, ಈಗಾಗಲೇ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್‍ಐಆರ್ ದಾಖಲಾದ್ದು, ಮೂರು ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ? ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಈ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್ ತಾಕೀತು ಮಾಡಿದೆ. ಈ ಸಂಬಂಧ ಒಂದು ದಿನ ಅವಕಾಶ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜ.14ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು
ಅರ್ಜಿಯಲ್ಲಿ ಏನಿದೆ?: ರಾಜ್ಯದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಪ್ರಾರಂಭವಾಗಿದ್ದು, ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅವರು ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು. ಜೊತೆಗೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಕ್ರಮಕ್ಕಾಗಿ ಮನವಿ ಮಾಡಿ ನರೇಂದ್ರ ಪ್ರಸಾದ್ ಹಾಗೂ ಶಂಭುಲಿಂಗೇಶ್ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ತನಿಖಾ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ನೇತೃತ್ವ