ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಬರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kolluru Mookambika Temple) ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಪ್ರಶ್ನಿಸಿ ಹೈಕೋರ್ಟ್‍ಗೆ (Highcourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬವರು ಪಿಐಎಲ್ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಇದನ್ನೂ ಓದಿ: 4 ದಿನದ ಕೂಸನ್ನು ಬಿಸಿ ನೀರಿನಲ್ಲಿ ಕೂರಿಸಿ ಸ್ನಾನ ಪ್ರಕರಣ- ಧಾರವಾಡದ ಆಸ್ಪತ್ರೆಗೆ 10 ಲಕ್ಷ ದಂಡ
Advertisement
Advertisement
ಯೋಜನೆಯ ಪ್ರಕಾರ, ಕಾಮಗಾರಿ ನಡೆದರೆ ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು 15 ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.
Advertisement
ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜೊತೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.