Bengaluru City
ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ರಾಜಕೀಯ ಜೋರಾಗಿದ್ದು ಜೆಡಿಎಸ್ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.
ಶಾಸಕ ಪಿಳ್ಳಮುನಿಶಾಮಪ್ಪ ದೇವನಹಳ್ಳಿ ಕ್ಷೇತ್ರಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ಕೆ.ಬಿ.ಕೋಳಿವಾಡಗೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರದಲ್ಲಿ ಎಚ್‍ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಯ ವ್ಯಕ್ತಪಡಿಸಿದ್ದಾರೆ.
ರಾಜ್ಯಾಧ್ಯಕ್ಷರು ನಮ್ಮ ತಾಲೂಕಿನಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ತೆಗೆದುಕೊಂಡು ಕೆಲ ನಿರ್ಧಾರಗಳು ನನಗೆ ಬೇಸರ ತಂದಿದೆ. ಹೀಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ. ತಕ್ಷಣ ನನ್ನ ರಾಜೀನಾಮೆ ಅಂಗೀಕರಿಸಿ ಎಂದು ರಾಜೀನಾಮೆ ಪತ್ರದಲ್ಲಿ ಪಿಳ್ಳಮುನಿಶಾಮಪ್ಪ ಮನವಿ ಮಾಡಿಕೊಂಡಿದ್ದಾರೆ.
ರಾಜೀನಾಮೆ ವಿಚಾರ ತಿಳಿಯುತ್ತಿದ್ದಂತೆ ಎಚ್‍ಡಿ ಕುಮಾರಸ್ವಾಮಿ ಪಿಳ್ಳಮುನಿಶಾಮಪ್ಪ ಅವರನ್ನು ಮನವೊಲಿಸುವ ಪ್ರಯತ್ನ ಆರಂಭಿಸಿದ್ದಾರೆ.
