ಚಿಕ್ಕಬಳ್ಳಾಪುರ: ಇಲ್ಲಿನ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಿಪಿಎಂ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಬಾಗೇಪಲ್ಲಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement
ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐಎಂನಿಂದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ 2 ಬಾರಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯದ ಗಮನ ಸೆಳೆದಿದ್ದರು. ಅವರ ನಿಧನರಾದ ನಂತರ ಕ್ಷೇತ್ರದಲ್ಲಿ ಸಿಪಿಎಂ ಅಸ್ತಿತ್ವವಿಲ್ಲದಂತಾಗುತ್ತಿತ್ತು. ಇದೀಗಾ ಮತ್ತೆ ಬಲ ಪಡಿಸಲು ಮುಂದಾಗಿರುವ ಸಿಪಿಐಎಂ ಪಕ್ಷ ಇಂದು ಬಾಗೇಪಲ್ಲಿಯಲ್ಲಿ ಸಮಾವೇಷ ನಡೆಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಇದನ್ನೂ ಓದಿ: ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್
Advertisement
Advertisement
Advertisement
ಬಾಗೇಪಲ್ಲಿ ಪಟ್ಟಣದಲ್ಲಿ ಸಿಪಿಐಎಂ ಪಕ್ಷದ ನಾಯಕರು ರಾಜ್ಯಮಟ್ಟದ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದಕ್ಕಾಗಿ ಬಾಗೇಪಲ್ಲಿ ಪಟ್ಟಣದ ಪ್ರಮುಖ ರಸ್ತೆಗಳು, ಗಲ್ಲಿಗಳು ಕೆಂಬಾವೂಟದಿಂದ ಸಿಂಗರಿಸಿಕೊಂಡಿವೆ. ಸಮಾವೇಶದಲ್ಲಿ ಕೇರಳ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಪಕ್ಷದ ಕೇಂದ್ರ ನಾಯಕರು, ಕೇಂದ್ರದ ಪೊಲಿಟಿಕಲ್ ಬ್ಯೂರೋ ಸದಸ್ಯರಾದ ಎಂ.ಎ.ಬೇಬಿ, ಜಿವಿ.ರಾಘವುಲು, ಕೇಂದ್ರ ಸಮಿತಿ ಸದಸ್ಯ ಕೆ.ಎನ್.ಉಮೇಶ್, ರಾಜ್ಯ ಕಾರ್ಯದರ್ಶಿ ಬಸವರಾಜು ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಜಿ.ವಿ.ಶ್ರೀರಾಮರೆಡ್ಡಿ ಪಕ್ಷ ತೊರೆದು ನಿಧನರಾದ ನಂತರ ಪಕ್ಷದಲ್ಲಿ ಹೇಳಿಕೊಳ್ಳುವಂತಹ ಪ್ರಭಾವಿಗಳು ಇಲ್ಲ. ಆದರೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಸಿಪಿಐಎಂ ಪಕ್ಷದ ಕಾರ್ಯಕರ್ತರಿದ್ದಾರೆ. ಇದರಿಂದ ಮತ್ತೇ ಸಿಪಿಐಎಂ ಪಕ್ಷದ ಬಾವುಟ ಹಾರಿಸಲು ಯೋಜನೆ ರೂಪಿಸಿರುವ ಸಿಪಿಐಎಂ ನಾಯಕರು, ಕಾರ್ಮಿಕರು, ದುಡಿಯುವ ವರ್ಗ ಸೇರಿದಂತೆ ದೀನದಲಿತರನ್ನು ಒಂದುಗೂಡಿಸಿ ಪಕ್ಷದತ್ತ ಸೆಳೆಯಲು ಮುಂದಾಗಿದ್ದಾರೆ.
ರಾಜ್ಯಕ್ಕೆ ಆಗಮಿಸಿರುವ ಪಿಣರಾಯ್ ವಿಜಯನ್ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ವೇಳೆ ಅಂತರರಾಜ್ಯ ಸಮಸ್ಯೆಗಳು ಹಾಗೂ ಹಿತಾಸಕ್ತಿಗಳ ಕುರಿತು ಚರ್ಚೆ ನಡೆಸಿದರು. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ