ತಿರುವನಂತಪುರಂ: ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ (Kerala Law And Order) ಕೇರಳದಲ್ಲಿದೆ. ಕಳೆದ ಕೆಲ ವರ್ಷಗಳಿಂದ ಯಾವುದೇ ಕೋಮುಗಲಭೆಗಳು ಕೇರಳದಲ್ಲಿ ನಡೆದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲೇ ಅತ್ಯುತ್ತಮವಾದ ಕಾನೂನು ವ್ಯವಸ್ಥೆಯನ್ನು ನಾವು ಹೊಂದಿದ್ದೇವೆ. ಕಳೆದ ಕೆಲ ವರ್ಷಗಳಿಂದ ಒಂದೇ ಒಂದು ಕೋಮುಗಲಭೆ (Communal Violence), ಹಿಂಸಾಚಾರವೂ ಅಲ್ಲಿ ನಡೆದಿಲ್ಲ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಗುರುತಿನ ಪುರಾವೆಗಳಿಲ್ಲದೇ 2,000 ರೂ. ನೋಟುಗಳ ವಿನಿಮಯ – ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
Advertisement
Advertisement
ಇತ್ತೀಚೆಗಷ್ಟೇ ಕೇರಳ ದೇಶದ ಮೊದಲ ಇ-ಆಡಳಿತ (E Governance) ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಮೈಲಿಗಲ್ಲು ಸಾಧಿಸಿದೆ. ಇ-ಆಡಳಿತದ ಮೂಲಕ ನಾವು ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಒಳಗೊಳ್ಳುವಿಕೆಯನ್ನು ಸಾಧಿಸುತ್ತಿದ್ದೇವೆ. ತಡೆರಹಿತ ಸಾರ್ವಜನಿಕ ಸೇವೆಗಳನ್ನು ಕಲ್ಪಿಸಲು ತಂತ್ರಜ್ಞಾನವನ್ನ ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದೇವೆ. 900ಕ್ಕೂ ಹೆಚ್ಚು ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್ ಶಾ ವಾರ್ನಿಂಗ್
Advertisement
Advertisement
ಅಲ್ಲದೇ ಈಗಾಗಲೇ ಸರ್ಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 2 ಸಾವಿರ ವೈಫೈ ಹಾಟ್‌ಸ್ಪಾಟ್ (WiFi Hotspots) ಸ್ಥಾಪಿಸಲಾಗಿದೆ. ಇದರೊಂದಿಗೆ ಇನ್ನೂ 2,000 ಹಾಟ್‌ಸ್ಪಾಟ್‌ಗಳನ್ನ ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.