ತಿರುವನಂತಪುರ: ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಇಂದಿಗೂ ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು.
ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಾಪುವನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿದ್ದಾರೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ. ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಸಾರೋಣ ಎಂದು ಹೇಳಿದರು.
Advertisement
#MahatmaGandhi was murdered by the very forces that still slaughter people in the name of religion. They are the biggest threat to our country today. Gandhiji’s memory is more relevant now than ever before. This #Martyrs‘Day, let’s pledge to fight communalism, promote fraternity. pic.twitter.com/go6dJ37kg8
— Pinarayi Vijayan (@vijayanpinarayi) January 30, 2022
Advertisement
ಗಾಂಧೀಜಿ ಅವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಟ್ವೀಟ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಂಪೂರ್ಣವಾಗಿ ನೋವು ಹೇಳಿಕೊಳ್ಳೋ ಸ್ಥಿತಿಯಲ್ಲಿಲ್ಲ, ಅದರೊಂದಿಗೆ ಬದುಕ್ತಿದ್ದೇವೆ: ಅಪ್ಪು ನೆನೆದ ಶಿವಣ್ಣ
Advertisement
Advertisement
ಇಂದು ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ. ಧೇಶಾದ್ಯಂತ ಅವರನ್ನು ಸ್ಮರಿಸುತ್ತಿದ್ದಾರೆ. ಜೊತೆಗೆ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ