ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಕೋಟಿಗೊಬ್ಬ-3 ಚಿತ್ರವನ್ನು ಪೈರಸಿ ಮಾಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಂದಿದ್ದ ಬೆದರಿಕೆ ಸಂದೇಶ ಹಿನ್ನೆಲೆ ನಿರ್ಮಾಪಕ ಸೂರಪ್ಪಬಾಬು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲೇ ಎಚ್ಚೆತ್ತಿರುವ ಸ್ಯಾಂಡಲ್‍ವುಡ್ ನಿರ್ಮಾಪಕ ಸಂಘವು ಕನ್ನಡ ಚಿತ್ರಗಳ ಪೈರಸಿ ತಡೆಯಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ದೂರು ನೀಡಿದೆ.
Advertisement
ಥಿಯೇಟರ್ ಗಳಲ್ಲಿ ಪೂರ್ಣಾವಧಿ ಆಸನಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅಕ್ಟೋಬರ್ ನಲ್ಲಿ ಸಾಲು-ಸಾಲು ಚಿತ್ರಗಳು ತೆರೆಕಾಣಲು ಸಜ್ಜಾಗಿವೆ. ಪ್ರಮುಖವಾಗಿ ಕೋಟಿಗೊಬ್ಬ-3, ಸಲಗ, ಭಜರಂಗಿ-2 ಸೇರಿದಂತೆ ಇನ್ನಿತರ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಕಷ್ಟಪಟ್ಟು ನಿರ್ಮಿಸಿದ ಚಿತ್ರಗಳಿಗೆ ಪೈರಸಿ ಆಗುವ ಆತಂಕ ನಿರ್ಮಾಪಕರಿಗೆ ಇರುವ ಹಿನ್ನೆಲೆಯಲ್ಲಿ ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ನೇತೃತ್ವದ ನಿಯೋಗ ಕಮಲ್ ಪಂತ್‍ಗೆ ಪೈರಸಿ ತಡೆಯುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ನಾನು, ಸೌಜನ್ಯ ಲಿವಿಂಗ್ ಟುಗೆದರ್‌ನಲ್ಲಿ ಇರಲಿಲ್ಲ: ವಿವೇಕ್
Advertisement
Advertisement
ಈ ಸಂಬಂಧ ಮಾತನಾಡಿದ ಪ್ರವೀಣ್, ಇಂದಿನಿಂದ ಥಿಯೇಟರ್ ಗಳಲ್ಲಿ ಶೇ.100ರಷ್ಟು ಪೂರ್ಣಾವಧಿ ಆಸನಕ್ಕೆ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ಈ ತಿಂಗಳಿಂದ ಸಾಲು-ಸಾಲು ಬಿಗ್ ಬಜೆಟ್ ಚಿತ್ರಗಳು ರಿಲೀಸ್ ಆಗುತ್ತಿವೆ. ಕೋಟ್ಯಂತರ ರೂಪಾಯಿ ಹಾಕಿ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡುತ್ತಾರೆ. ತೆರೆಗೆ ಬರಲು ಕೆಲದಿನಗಳೇ ಇರಬೇಕಾದರೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಪೈರಸಿ ಮಾಡುತ್ತಾರೆ. ಇದರಿಂದ ಎಷ್ಟೋ ನಿರ್ಮಾಪಕರು ಬೀದಿಗೆ ಬೀಳುತ್ತಾರೆ. ಸಂಪೂರ್ಣವಾಗಿ ಪೈರಸಿ ತಡೆಯುವ ನಿಟ್ಟಿನಲ್ಲಿ ಇಂದು ಪೊಲೀಸ್ ಕಮೀಷನರ್ ಗೆ ದೂರು ನೀಡಿದ್ದೇವೆ. ನಮಗೆ ಸ್ಪಂದಿಸಿರುವ ಪೊಲೀಸ್ ಆಯುಕ್ತರು ಪೈರಸಿ ತಡೆಯುವ ನಿಟ್ಟಿನಲ್ಲಿ ಸಿಸಿಬಿಯಿಂದ ಪ್ರತ್ಯೇಕವಾಗಿ ಸ್ಕ್ವಾಡ್ ಟೀಮ್ ರಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.
Advertisement
ನಿರ್ಮಾಪಕ ಕೆ.ಮಂಜು ಮಾತನಾಡಿ ಪೊಲೀಸ್ ಕಮೀಷನರ್ ಕಮಲ್‍ಪಂತ್ ಅವರು ಪ್ರತ್ಯೇಕ ಸ್ವ್ಕಾಡ್ ಟೀಮ್ ಮಾಡಿ ಪೈರಸಿ ಮಾಡುವ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಸ್ವ್ಕಾಡ್ ಟೀಮ್ ರಚನೆಯಿಂದ ನಿರ್ಮಾಪಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ತಿಂಗಳಲ್ಲಿ ನಾಲ್ಕೈದು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗಲಿವೆ. ದಯವಿಟ್ಟು ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಚಪಾತಿ, ಪಲ್ಯ ಮಾಡಿದ್ದೆ, ತಿನ್ನೋಕೆ ಮಗಳೇ ಬರಲಿಲ್ಲ- ನಟಿ ಸೌಜನ್ಯ ತಾಯಿ ಕಣ್ಣೀರು