ಕಾರವಾರ: ಧಾರವಾಡದ ಮುಸ್ಲಿಂ ಕುಟುಂಬವೊಂದು (Dharwad Muslim Family) 2 ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ (Gokarna) ಪಿತೃಪಕ್ಷದ (Pitru Paksha) ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಇಲ್ಲಿಯ ಪಿತೃಶಾಲೆಯಲ್ಲಿ ನಡೆಸಿದ್ದಾರೆ.
Advertisement
Advertisement
ನಾವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದು ಪಿತೃಕಾರ್ಯದಲ್ಲಿ ಭಾಗಿಯಾದ ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ತಿಳಿಸಿದರು.
Advertisement
ಮುಸ್ಲಿಂ ಕುಟುಂಬ ಜ್ಯೋತಿಷಿಯ ಸಲಹೆಯಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ.ನಾಗರಾಜ ಭಟ್ ಹಾಗೂ ವೇ.ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಇದನ್ನೂ ಓದಿ: ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್
Advertisement
ಗೋಕರ್ಣದಲ್ಲಿ ಕ್ರೈಸ್ತ ಸಮುದಾಯದವರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬ ಇದೇ ಮೊದಲ ಬಾರಿಗೆ ಬಾರಿಗೆ ಪಿತೃಕಾರ್ಯ ನೆರವೇರಿಸಿದೆ ಎಂಬ ಮಾತುಗಳು ಕೇಳಿಬಂದಿವೆ.
Web Stories