ಕಾರವಾರ: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 (Air India Crash) ದುರಂತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ (Gokarna) ಮೃತರ ಪಿತೃಕಾರ್ಯ (Pitru Karya) ನೆರವೇರಿಸಲಾಯಿತು.
ಜೂನ್ 12 ರಂದು ದುರಂತ ಸಂಭವಿಸಿ 260 ಜನ ಮೃತಪಟ್ಟಿದ್ದರು. ಇದರಲ್ಲಿ ಭಾರತ ಹಾಗೂ ಲಂಡನ್ ಪ್ರಜೆಗಳು ಸಹ ಅಸುನೀಗಿದ್ದರು. ಈ ಘಟನೆ ನಡೆದು ನಾಲ್ಕು ತಿಂಗಳ ನಂತರ ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಮೃತರ ಪಿತೃಕಾರ್ಯ ನೆರವೇರಿಸಲಾಗಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್ ಇಂಡಿಯಾ
ಪಿತೃಕಾರ್ಯಕ್ಕೆ ಪ್ರಾಮುಖ್ಯತೆ ಹೊಂದಿರುವ ಗೋಕರ್ಣದಲ್ಲಿ ಮೃತರ ಕುಟುಂಬದವರು ಪಿತೃಪಕ್ಷದಲ್ಲಿ ಪಿಂಡ ಪ್ರದಾನ ಮಾಡಿ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಬೇಡಿಕೊಳ್ಳುವುದು ಸಂಪ್ರದಾಯ. ದೇಶ ವಿದೇಶದಿಂದಲೂ ಪಿತೃಪಕ್ಷದ ಸಂದರ್ಭದಲ್ಲಿ ಗೋಕರ್ಣಕ್ಕೆ ಬಂದು ಪಿತೃಕಾರ್ಯ ನಡೆಸಿ, ಇಲ್ಲಿಯೇ ಅಸ್ತಿ ವಿಸರ್ಜಿಸುತ್ತಾರೆ. ಹೀಗಾಗಿ, ಮಹಾಬಲೇಶ್ವರ ದೇವಸ್ಥಾನ ಕಾಶಿಯಷ್ಟೇ ಪ್ರಾಮುಖ್ಯತೆ ಹೊಂದಿದೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪುಣ್ಯಾಶ್ರಮದಲ್ಲಿ ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಮಡಿದ 260 ಜನರ ಪಿತೃಕಾರ್ಯ ನಡೆಸಲಾಗಿದೆ. ದೇಶದಲ್ಲಿ ನಡೆದ ದೊಡ್ಡ ದುರಂತದ ಸಾಲಿಗೆ ಈ ವಿಮಾನ ದುರಂತ ಸೇರಿಹೋಗಿತ್ತು. ಹೀಗಾಗಿ ದುರಂತದಲ್ಲಿ ಮಡಿದ ಪ್ರತಿಯೊಬ್ಬರ ಹೆಸರನ್ನೂ ಸಹ ಪಡೆದು ಅವರ ಹೆಸರಲ್ಲಿ ಎಳ್ಳು-ನೀರಿನ ಅರ್ಗೆ ಸಮರ್ಪಿಸಿ ಪಿಂಡ ಪ್ರದಾನವನ್ನು ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ರಾಜು ಅಡಿಯವರು ತಮ್ಮ ಪುಣ್ಯಾಶ್ರಮದಲ್ಲಿ ನೆರವೇರಿಸಿದರು. ಇದನ್ನೂ ಓದಿ: Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ
ಗೋಕರ್ಣದ ಪುಣ್ಯಾಶ್ರಮದಲ್ಲಿ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜುಗೋಪಾಲ ಅಡಿ ಅವರ ನೇತೃತ್ವದಲ್ಲಿ 30 ಜನ ಪುರೋಹಿತರೊಂದಿಗೆ ಈ ಪಿತೃಕಾರ್ಯವನ್ನು ಕೈಗೊಳ್ಳಲಾಯಿತು. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ದಿವಂಗತ ವಿಜಯ್ ರೂಪಾನಿ ಅವರಿಂದ ಹಿಡಿದು ಲಂಡನ್‌ನ ಮೃತ ಪ್ರಜೆಗಳಿಗೂ ಇಲ್ಲಿ ಪಿತೃಕಾರ್ಯ ನಡೆಸಲಾಯಿತು. ಎರಡು ದಿನದ ಈ ಕಾರ್ಯದಲ್ಲಿ ವಿಘ್ನ ನಿವಾರಕ ಗಣಪತಿಯ ಪೂಜೆ ನಡೆಸಿ, ನಾರಾಯಣ, ಈಶ್ವರನ ನೆನೆದು ನಾರಾಯಣ ಬಲಿ, ದಶ ಪಿಂಡ ಪ್ರದಾನ ಮಾಡಲಾಯ್ತು. ನಂತರ ಗೋದಾನ, ವಸ್ತ್ರದಾನ ಮಾಡಲಾಗಿದ್ದು, ಇಂದು ನೂರಾರು ಜನರಿಗೆ ಮೃತರ ಹೆಸರಿನಲ್ಲಿ ಅನ್ನ ಸಂತರ್ಪಣೆ ಕಾರ್ಯ ಸಹ ಕೈಗೊಳ್ಳಲಾಗಿದೆ.
ಈ ಕಾರ್ಯವನ್ನು ಮುಂದೆ ದೇಶದಲ್ಲಿ ಈರೀತಿಯ ಘಟನೆ ನಡೆಯದಿರಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂಬ ಉದ್ದೇಶದಿಂದ ಮಾಡಲಾಗಿದೆ. ಪಿತೃಮಾಸದ ಈ ಸಂದರ್ಭದಲ್ಲಿ ಪುಣ್ಯಾಶ್ರಮದ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜು ಗೋಪಾಲ ಅಡಿ ಅವರಿಂದ ಪಿತೃಕಾರ್ಯ ನೆರವೇರಿಸಲಾಗಿದೆ.