ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.
ಈ ಕುರಿತು ಮಾತನಾಡಿರುವ ವೈದ್ಯ ಡಾ.ದಿವ್ಯಪ್ರಕಾಶ್ (Dhivya Prakash), ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಇಂದೇ ಆಕೆಯನ್ನ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್ ಇಲ್ಲ: ಬಾಲಾಜಿ ಪೈ
Advertisement
Advertisement
ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಇದುವರೆಗೂ 3 ಕೋಟಿಯಷ್ಟು ಮೌಲ್ಯದ ನಗದು, ಚಿನ್ನ ಜಪ್ತಿ
Advertisement
ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.
Advertisement
ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಳಿಸಲಾಗಿತ್ತು.
Web Stories