ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ತಾತ್ಕಾಲಿಕವಾಗಿ ಹಣಕಾಸು ಖಾತೆಯನ್ನು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.
ಕೇಂದ್ರ ಬಜೆಟ್‍ಗೆ ಕೆಲವೇ ದಿನಗಳು ಬಾಕಿ ಇರುವ ವೇಳೆಯಲ್ಲಿ ಹಣಕಾಸು ಖಾತೆಯ ಜವಾಬ್ದಾರಿಯನ್ನ ಪಿಯೂಷ್ ಗೋಯಲ್ ವಹಿಸಿಕೊಂಡಿದ್ದಾರೆ. ಕಳೆದ ವರ್ಷ ಅರುಣ್ ಜೇಟ್ಲಿ ಕಿಡ್ನಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಚಿಕಿತ್ಸೆಗಾಗಿ ಅರುಣ್ ಜೇಟ್ಲಿ ಅವರು ಅಮೆರಿಕಾಗೆ ತೆರಳಿದ ಹಿನ್ನೆಲೆಯಲ್ಲಿ ಪಿಯೂಷ್ ಗೋಯಲ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನ ಅಧಿಕೃತ ಮಾಹಿತಿಯನ್ನು ನೀಡಿದೆ.
Advertisement
Advertisement
ಅರುಣ್ ಜೇಟ್ಲಿ ಅವರು ಸಚಿವರಾಗಿಯೇ ಮುಂದುವರಿಯಲಿದ್ದಾರೆ. ಆರೋಗ್ಯ ಚೇತರಿಕೆ ಬಳಿಕ ಖಾತೆ ಹಸ್ತಾಂತರ ಆಗಲಿದೆ. ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದ್ದು, ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆಗೂ ಮುನ್ನ ಎನ್‍ಡಿಎ ಸರ್ಕಾರ ಮಂಡಿಸುವ ಕೊನೆಯ ಬಜೆಟ್ ಇದಾಗಿದೆ.
Advertisement
ಅಮೆರಿಕಾಗೆ ತೆರಳಿದ ಅರುಣ್ ಜೇಟ್ಲಿ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವರು ಆರೋಗ್ಯ ಚೇತರಿಕೆಗೆ ಹಾರೈಸಿ ಟ್ವೀಟ್ ಮಾಡಿದ್ದರು.
Advertisement
Arun Jaitley will be designated as Minister without portfolio during the period of his indisposition or till such time he is able to resume his work as Minister of Finance and Minister of Corporate Affairs. https://t.co/qh80IPqD2E
— ANI (@ANI) January 23, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv