ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯ ಹಾಗೂ ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರೀಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದು ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕರ್ನಾಟಕ ನಾವೀನ್ಯತೆ ಕೇಂದ್ರದಲ್ಲಿನ ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT-B) ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಇ-ಹರಾಜಿನಲ್ಲಿ ಭಾಗವಹಿಸಲು ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ
Advertisement
Took a tour of K-Tech Centre for Excellence in Machine Learning & Robotics at IIIT-Bengaluru.
Interacted with startups in several sectors including IT, Biotech & Electronics.
Discussed steps needed to transform ???????? into an innovation hub of the world. pic.twitter.com/YE9ioTJGoz
— Piyush Goyal (@PiyushGoyal) September 19, 2021
Advertisement
ಜಾಗತಿಕ ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಗುಜರಾತ್‍ನಂತೆ ಕರ್ನಾಟಕದಲ್ಲಿ ಮಾದರಿ ಸಂಪುಟ ರಚನೆ ಆಗಲಿ: ವಿಜಯೇಂದ್ರ
Advertisement
Advertisement
ಸರ್ಕಾರ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ. ಇಲ್ಲಿನ ಸಂವಾದ ಸಾರಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಭೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ
ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟಿಗೆ ಟ್ವೀಟ್ ಮಾಡಿದ್ದ ರಾಜಸ್ಥಾನ ಸಿಎಂ ಒಎಸ್‍ಡಿ ರಾಜೀನಾಮೆ!
ಸಂವಾದದದಲ್ಲಿ ಮಾಹಿತಿ-ತಂತ್ರಜ್ಞಾನದ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ಮಾತನಾಡಿ ಸಚಿವರಿಗೆ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್, ಇನ್ ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯರಾದ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.