ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ವಿರುದ್ಧ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಯುವಕರು ಮುಂದಾಗಿದ್ದಾರೆ.
ಕೆಪಿಎಸ್‌ಸಿ ಅಕ್ರಮದ ಬಗ್ಗೆ ಅಪರಾಧ ತನಿಖಾ ಇಲಾಖೆ (CID) ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ವಿದ್ಯಾರ್ಥಿಗಳು ತಾವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿಯಲ್ಲಿ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಹೋರಾಟದ ಮಾದರಿಯಲ್ಲಿಯೇ ಈ ಪ್ರತಿಭಟನೆ ನಡೆಯಲಿದೆ.
ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ ಹೋರಾಟ ಪ್ರಾರಂಭವಾಗಲಿದೆ. ಎಲ್ಲ ವಿದ್ಯಾರ್ಥಿ ಸಂಘಟನೆಗಳು ಈ ಪ್ರತಿಭಟನೆಗೆ ಸಜ್ಜಾಗಿವೆ. ಹೋರಾಟದಲ್ಲಿ ಮರುಪರೀಕ್ಷೆ ನಡೆಸುವುದರ ಕುರಿತು ವಿದ್ಯಾರ್ಥಿಗಳು ಧ್ವನಿ ಎತ್ತಲಿದ್ದಾರೆ.
ಪಶುವೈದ್ಯಾಧಿಕಾರಿಗಳ ಹುದ್ದೆಯಲ್ಲಿ ಗೋಲ್‌ಮಾಲ್ ಆಗಿದ್ದು, ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಿಂದಲೇ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಆದ್ದರಿಂದ ಅಕ್ರಮದ ಖಂಡಿಸಿ ವಿದ್ಯಾರ್ಥಿಗಳೇ ಬೀದಿಗಿಳಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ ಮುಡಿಗೆ ವಿಶ್ವ ಸುಂದರಿ ಕಿರೀಟ!
ಪರೀಕ್ಷಾರ್ಥಿಗಳು ಈಗಾಗಲೇ ಮರುಪರೀಕ್ಷೆಗಾಗಿ ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ, ಇದರ ಬೆನ್ನಲ್ಲೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.ಇದನ್ನೂ ಓದಿ: KPSC Scam | ಕಿಂಗ್‌ಪಿನ್ ಕನ್ನಾಳೆ ಬಳಿ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ರಂತೆ 15 ಅಭ್ಯರ್ಥಿಗಳು
