ಬೆಂಗಳೂರು: ಕರ್ನಾಟಕದಲ್ಲೂ ಮತಾಂತರ ನಿಷೇಧ ಕಾನೂನು ಜಾರಿಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಬಾರದು. ಆ ನಿಟ್ಟಿನಲ್ಲಿ ಕಾನೂನು ಮಾಡಲು ಚಿಂತನೆ ನಡೆದಿದೆ. ಅದಕ್ಕಾಗಿ ಬೇರೆ ಬೇರೆ ರಾಜ್ಯದ ಕಾನೂನು ತರಿಸಿಕೊಳ್ಳಲಾಗಿದ್ದು, ಅಧ್ಯಯನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೇರೆ ಗುಂಪಿನ ರಕ್ತ ಹಾಕಿದ ವೈದ್ಯರು – ಯುವತಿ ಸಾವು
Advertisement
ಆಮಿಷವೊಡ್ಡುವುದು, ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ – ಪಟ್ಟಣ ಪಂಚಾಯ್ತಿ ಸದಸ್ಯೆ ಆತ್ಮಹತ್ಯೆಗೆ ಯತ್ನ
Advertisement
Advertisement
ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ್ ಗೌಡ, ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ, ಹಿಂದೂ ಧಾರ್ಮಿಕ ಸಂಸ್ಥೆಗಳ 50ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮತಾಂತರವನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿದ್ದರು.