ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸುತ್ತಿದ್ದಂತೆ ವಿವಾದ ಮತ್ತಷ್ಟು ತಾರಕಕ್ಕೇರುತ್ತಿದೆ.
Advertisement
ಸ್ವಾತಂತ್ರ್ಯ ದಿನಾಚರಣೆಗಾಗಲಿ, ಗಣೇಶೋತ್ಸವಕ್ಕಾಗಲಿ ಯಾರಾದ್ರೂ ಅರ್ಜಿ ಸಲ್ಲಿಸಿದರೆ ಮುಂದಿನ ನಿರ್ಧಾರ ಮಾಡೋದಾಗಿ ಸಚಿವ ಅಶೋಕ್ ಹೇಳಿದ್ದರು. ಈ ಬೆನ್ನಲ್ಲೇ ಗಣೇಶೋತ್ಸವಕ್ಕೆ ಪ್ರತ್ಯೇಕವಾಗಿ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಶ್ರೀರಾಮಸೇನೆ, ಹಿಂದೂ ಸಂಘಟನೆಗಳು ಮುಂದಾಗಿವೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಶುರುವಾಗುತ್ತಾ ಮೈನಿಂಗ್ ಚಾಪ್ಟರ್ 2? – ಅನುಮತಿ ಕೇಳಿದ ರೆಡ್ಡಿ
Advertisement
Advertisement
ಒಂದು ವೇಳೆ ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ, ಇದೇ ಮೈದಾನದಲ್ಲಿ ಶಿವಲಿಂಗ ಸ್ಥಾಪನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿವೆ. ಅಲ್ಲದೇ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡೇ ಮಾಡ್ತೀವಿ ಎಂದು ಶ್ರೀ ರಾಮಸೇನೆ ಬೆಂಗಳೂರು ಘಟಕ ಸಾಮಾಜಿಕ ಜಾಲತಾಣದಲ್ಲಿ ಸವಾಲು ಹಾಕಿದೆ. ಇದನ್ನೂ ಓದಿ: ನಾನು ಉತ್ಸವ ಮಾಡೋಕೆ ಹೋಗಿಲ್ಲ- ಸಚಿವರು ಕಾಣೆಯಾಗಿದ್ದಾರೆ ಎಂದ ಕಾಂಗ್ರೆಸ್‌ಗೆ ಬಿ.ಸಿ ಪಾಟೀಲ್ ಟಾಂಗ್
Advertisement
ರಿಪಬ್ಲಿಕ್ ಆಫ್ ಕನಕಪುರದ ಮಾದರಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಪಬ್ಲಿಕ್ ಆಫ್ ಚಾಮರಾಜಪೇಟೆ ಕಟ್ಟಿಕೊಂಡಿದ್ದಾರಾ?
ಇದು ಸ್ವತಂತ್ರ ಭಾರತ. ಇಲ್ಲಿ ಪಾಳೆಗಾರಿಕೆ ನಡೆಸಲು ಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ?#ರಿಪಬ್ಲಿಕ್‌ಆಫ್‌ಚಾಮರಾಜಪೇಟೆ pic.twitter.com/P836kM3kFq
— BJP Karnataka (@BJP4Karnataka) August 9, 2022
ಇನ್ನೂ ಈದ್ಗಾ ಮೈದಾನವನ್ನು ಇಂಥದ್ದಕ್ಕೇ ಕೊಡ್ಬೇಕು ಎಂಬ ಜಮೀರ್ ವಾದ ಸರಿಯಲ್ಲ ಎಂದು ಸಚಿವ ಅಶ್ವಥ್‌ನಾರಾಯಣ್ ಹೇಳಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕೇಂದ್ರ ವಲಯ ಡಿಸಿಪಿ, ಧಾರ್ಮಿಕ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಧ್ವಜಾರೋಹಣ ನಿರ್ಧಾರದಿಂದ ಹಿಂದೆ ಸರಿಯಲ್ಲ ಅಂತ ಚಾಮರಾಜಪೇಟೆ ನಾಗರಿಕರ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಆಟದ ಮೈದಾನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.