ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ ತುರ್ತು ಲ್ಯಾಂಡಿಗ್ ಮಾಡಿದೆ.
ಘಟನೆಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ ವಿಮಾನದಲ್ಲಿದ್ದ ವ್ಯಕ್ತಿಯೊಬ್ಬರು, ಅವರ ಸಲಹೆಗಾರರು ಮತ್ತು ರಹಸ್ಯ ಸೇವೆಯೊಂದಿಗೆ ಸುರಕ್ಷಿತವಾಗಿ ವಿಮಾನವು ತುರ್ತು ಲ್ಯಾಂಡಿಗ್ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?
ನ್ಯೂ ಓರ್ಲಿಯನ್ಸ್‌ನಲ್ಲಿ ತಮ್ಮ ಫ್ಲೋರಿಡಾ ಎಸ್ಟೇಟ್ ಮಾರ್-ಎ-ಲಾಗೊಗೆ ಹಿಂತಿರುಗುತ್ತಿದ್ದಾಗ ಶನಿವಾರ ರಾತ್ರಿ 11 ಗಂಟೆಗಿಂತ ಸ್ವಲ್ಪ ಮುಂಚೆ ತಾಂತ್ರಿಕ ವೈಫಲ್ಯ ಸಂಭವಿಸಿದೆ. ಘಟನೆಯ ಬಗ್ಗೆ ತಿಳಿದಿರುವ ವ್ಯಕ್ತಿಯ ಪ್ರಕಾರ, ನ್ಯೂ ಓರ್ಲಿಯನ್ಸ್ ಲೇಕ್‍ಫ್ರಂಟ್ ವಿಮಾನ ನಿಲ್ದಾಣವನ್ನು ತೊರೆದ ನಂತರ ಸುಮಾರು 120 ಕಿಲೋಮೀಟರ್ ದೂರದಲ್ಲಿ ಈ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Punjab Election Results 2022: ರಾಷ್ಟ್ರೀಯ ಕಚೇರಿ ಎದುರು ಬ್ಯಾನರ್, ಜಿಲೇಬಿ ರೆಡಿ – ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡ AAP
ತುರ್ತು ಲ್ಯಾಂಡಿಂಗ್ ಅನ್ನು ದೃಢಪಡಿಸಿದ ನಂತರ ಟ್ರಂಪ್ ವಕ್ತಾರರು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ತುರ್ತು ಲ್ಯಾಂಡಿಂಗ್ ನಂತರ, ಟ್ರಂಪ್ ಅವರ ತಂಡವು ಮತ್ತೊಂದು ಖಾಸಗಿ ವಿಮಾನವನ್ನು ತೆಗೆದುಕೊಂಡು ಅಂತಿಮವಾಗಿ ಮರುದಿನ ಬೆಳಿಗ್ಗೆ ಮಾರ್-ಎ-ಲಾಗೊಗೆ ತೆರಳಿದ್ದಾರೆ.