ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
1 Min Read
Ahmedabad Plane Crash Nikhil Kumaraswamy

ಬೆಂಗಳೂರು: ಅಹಮದಾಬಾದ್‌ನ (Ahmedabad) ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ (Plane Crash) ದುರಂತಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (Air India Flight) ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Ahmedabad Plane Crash Capt Sumeet Sabharwal is a LTC with 8200 Hrs of

 

ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಘಟನೆ ಏನು?
ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು

Ahmedabad Plane Crash

ಅಲ್ಲದೇ ಜನವಸತಿ ಪ್ರದೇಶದ ಕಟ್ಟಡಗಳಿಗೂ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 30 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!

Share This Article