ಭೋಪಾಲ್: ತರಬೇತಿ ವಿಮಾನವೊಂದು (Training Plane) ಶುಕ್ರವಾರ ಮುಂಜಾನೆ ದೇವಾಲಯವೊಂದಕ್ಕೆ (Temple) ಅಪ್ಪಳಿಸಿ ಪತನವಾಗಿರುವ (Plane Crash) ಘಟನೆ ಮಧ್ಯಪ್ರದೇಶದ (Madhya Pradesh) ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿ ನಡೆದಿದೆ. ವಿಮಾನ ಪತನದಲ್ಲಿ ತರಬೇತಿ ಪಡೆಯುತ್ತಿದ್ದ ಪೈಲಟ್ (Pilot) ಸಾವನ್ನಪ್ಪಿದ್ದಾರೆ.
ಖಾಸಗಿ ಕಂಪನಿಗೆ ಸೇರಿದ ವಿಮಾನ ಡುಮ್ರಿ ಗ್ರಾಮದ ದೇವಾಲಯದ ಗೋಪುರಕ್ಕೆ ಅಪ್ಪಳಿಸಿದ್ದರಿಂದ ಅಪಘಾತ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಪೈಲಟ್ಗಳಿದ್ದು, ಒಬ್ಬ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತಾನೇ ಇರಿದುಕೊಂಡು ಆಸ್ಪತ್ರೆ ದಾಖಲಾದ ವ್ಯಕ್ತಿ ವೈದ್ಯರಿಗೂ ಚಾಕು ಇರಿದ
ಈ ಬಗ್ಗೆ ರೇವಾ ಎಸ್ಪಿ ನವನೀತ್ ಭಾಸಿನ್ ಮಾಹಿತಿ ನೀಡಿದ್ದು, ಶುಕ್ರವಾರ ಮುಂಜಾನೆ ದುರ್ಘಟನೆ ನಡೆದಿದೆ. ಅಪಘಾತಕ್ಕೊಳಗಾದ ವಿಮಾನ ತರಬೇತಿ ವಿಮಾನವಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪೈಲಟ್ ಅನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ನಲ್ಲಿ ಬೆಂಕಿ!
ಮೇಲ್ನೋಟಕ್ಕೆ ಅಪಘಾತಕ್ಕೆ ಕಾರಣ ಹವಾಮಾನ ವೈಪರೀತ್ಯ ಎನ್ನಲಾಗಿದೆ. ಮಂಜು ಮುಸುಕಿದ ವಾತಾವರಣದಿಂದ ದಾರಿ ಸರಿಯಾಗಿ ಕಾಣಿಸದೇ ವಿಮಾನ ದೇವಾಲಯಕ್ಕೆ ಅಪ್ಪಳಿಸಿದೆ ಎಂದು ಶಂಕಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k