– ಕಮಲಾಪುರದಲ್ಲಿ ಸ್ಥಳ ಪರಿಶೀಲನೆ
ಬಳ್ಳಾರಿ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ(Hampi) ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ(Planetarium) ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು(N S Bosaraju) ತಿಳಿಸಿದರು.
ಸೋಮವಾರ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾಗಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಗೆ ನಾನಾ ಅವಾಂತರ | ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ: ಸಿ.ಟಿ ರವಿ
ಉತ್ತಮ ಜಾಗ ಮಂಜೂರು:
ಕಮಲಾಪುರದ(Kamalapura) ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಎಕ್ರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ
ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ 2ನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀ. ನಾನೋಸೀಮ್ ಡೋಮ್ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ(Siddaramaiah) ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ
ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.