ಬೀದರ್: ಇಂದು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೀದರ್‌ನ ಮಸೀದಿಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ.
ನಗರದ ಹುಮ್ನಾಬಾದ್ ಪಟ್ಟಣದಲ್ಲಿರುವ ಜನ ಬಿಡ ಪ್ರದೇಶದಲ್ಲಿರುವ ಮಸೀದಿಗಳಿಗೆ ಹುಮ್ನಾಬಾದ್ ಪುರಸಭೆಯಿಂದ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಹುಮ್ನಾಬಾದ್‍ನ ಜೀರಪೇಟೆ ಓಣಿಯ ಗೋಸಿಸಾಬ್ ಮಸೀದಿ, ಅಖಾಡಾ ನೂರ್ ಮಸೀದಿ, ಜಾಮಾ ಮಸೀದಿ ಸೇರಿದಂತೆ ಜಿಲ್ಲೆಯ ಅತೀ ಸೂಕ್ಷ್ಮ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ಲಾಸ್ಟಿಕ್ ಹೊದಿಕೆಯನ್ನು ಹಾಕಲಾಗಿದೆ. ಇದನ್ನೂ ಓದಿ: ಹೆಣ್ಣುಮಕ್ಕಳೇ ನಾನು ಪ್ರಧಾನಮಂತ್ರಿಯಾಗಲು ಶಕ್ತಿ ಕೊಟ್ಟಿದ್ದು: ಹೆಚ್‍ಡಿಡಿ
ಕಳೆದ ಬಾರಿ ಕಿಡಗೇಡಿಗಳು ಮಸೀದಿ ಮೇಲೆ ಬಣ್ಣವನ್ನು ಹಾಕಿ ಕೋಮು ಗಲಭೆಗೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಈ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಹೊದಿಕೆ ಜೊತೆಗೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ನಾನೂ ಹಿಂದೂ ಸಮಾಜದಲ್ಲಿಯೇ ಹುಟ್ಟಿದ್ದೇನೆ: ಎಚ್‍ಡಿಕೆ