ದಾವಣಗೆರೆ: ಅಂಗನವಾಡಿ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Advertisement
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಅಂಗನವಾಡಿ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಿಕ್ಸ್ ಆಗಿರುವ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಮಕ್ಕಳಿಗೆ ಕೊಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿರುವ ಹಿನ್ನೆಲೆ ಪೋಷಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆ ಪಡೆದವರ ಪ್ರವೇಶಕ್ಕೆ ಅಮೆರಿಕ ಅನುಮತಿ
Advertisement
Advertisement
ಈ ಪರಿಣಾಮ ಸುದ್ದಿ ತಿಳಿದ ತಕ್ಷಣ ಗ್ರಾಮಕ್ಕೆ ಸಿಡಿಪಿಒ ನಿರ್ಮಲಾ ದೌಡಾಯಿಸಿದ್ದಾರೆ. ಗ್ರಾಮಸ್ಥರು ಮತ್ತು ಸಿಬ್ಬಂದಿ ಅಕ್ಕಿ ಪರಿಶೀಲನೆ ನಡೆಸುತ್ತಿದ್ದು, ಅಂಗನವಾಡಿಯವರನ್ನು ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಇದನ್ನೂ ಓದಿ: ಲಸಿಕೆ ಪಡೆದ್ರೂ ಭಾರತೀಯರು ಕ್ವಾರಂಟೈನ್- ಬ್ರಿಟನ್ ಸರ್ಕಾರದ ಹೊಸ ನಿಯಮ
Advertisement
ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದ್ದು, ಅಕ್ಕಿ ಪರಿಶೀಲನೆ ಮಾಡಲು ಲ್ಯಾಬ್‍ಗೆ ಕಳುಹಿಸುವ ಚಿಂತನೆ ಮಾಡಲಾಗುತ್ತಿದೆ.