ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮೇಲೆ ಪ್ಲಾಸ್ಟಿಕ್ ಬಾಟಲಿ (Plastic water bottle) ಎಸೆದ ಘಟನೆ ಗುಜರಾತ್‌ನ (Gujarat) ರಾಜ್‌ಕೋಟ್‌ನ ಗರ್ಬಾದಲ್ಲಿ ನಡೆದಿದೆ.
ಶನಿವಾರ ರಾತ್ರಿ ಖೋಡಲ್ಧಾಮ್ ದೇವಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ಯಾರೋ ಬಾಟಲಿಯನ್ನು ಎಸೆದಿದ್ದಾರೆ. ಆದರೆ ಅವರಿಗೆ ಆ ಬಾಟಲಿ ತಾಗಲಿಲ್ಲ. ಈ ಘಟನೆ ವೀಡಿಯೋವೊಂದರಲ್ಲಿ ಬಹಿರಂಗವಾಗಿದೆ. ಇದನ್ನೂ ಓದಿ: ಶಿಕ್ಷಕರ ಮಧ್ಯೆ ಮಾರಾಮಾರಿ – ಕಿವಿಯೊಳಗಿನ ಪರದೆ ಹರಿಯುವಂತೆ ಸಹ ಶಿಕ್ಷಕನಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ
ಕೇಜ್ರಿವಾಲ್ ಅವರು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಯಾವುದೇ ಕಾರ್ಯಕರ್ತರೂ ಈವರೆಗೆ ದೂರು ದಾಖಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ