LatestLeading NewsMain PostNational

ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ

ಉತ್ತರಪ್ರದೇಶ: ದೇಶದಲ್ಲಿ ಧರ್ಮ ದಂಗಲ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಿಜಬ್‌, ಹಲಾಲ್‌ ವಿರೋಧಿ ಅಭಿಯಾನದಿಂದ ಶುರುವಾದ ಸಂಘರ್ಷ ಈಗ ಧಾರ್ಮಿಕ ಕಟ್ಟಡಗಳ ವ್ಯಾಪ್ತಿಗೆ ಬಂದು ನಿಂತಿದೆ. ಭಾರತದ ಐತಿಹಾಸಿಕ ದೇವಾಲಯಗಳನ್ನು ನಾಶಗೊಳಿಸಿ ಅದರ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಅನೇಕ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳು ಕೋರ್ಟ್‌ ಮೆಟ್ಟಿಲೇರಿವೆ. ಈಗ ಅಂತಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.

ಭಗವಾನ್ ಶ್ರೀಕೃಷ್ಣನ ಜನ್ಮಸ್ಥಳ ಎಂದು ನಂಬಲಾದ ಸ್ಥಳದಲ್ಲಿ ಇರುವ ಶಾಹಿ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳ ಗುಂಪು ಮಥುರಾದ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ದೇವರ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ವಿವಿಧ ಹಿಂದೂ ಗುಂಪುಗಳು ಮಥುರಾ ನ್ಯಾಯಾಲಯಗಳಲ್ಲಿ ಈ ಹಿಂದೆ ಹತ್ತು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಹಿಂದೂ ಸಮುದಾಯದ ಬಹುಪಾಲು ಜನರು ಮಸೀದಿ ಇರುವ ಸ್ಥಳದಲ್ಲಿ ಶ್ರೀಕೃಷ್ಣ ಜನಿಸಿದ್ದರೆಂದು ನಂಬುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಶೈಲೇಂದ್ರ ಸಿಂಗ್, ಒಂದು ಕಾಲದಲ್ಲಿ ದೇವಾಲಯವಿದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಇದರ ಸಂರಚನೆ ದೇವಾಲಯವನ್ನೇ ಹೋಲುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಯಾವುದೇ ಧರ್ಮದ ಗುರುತು ಇಲ್ಲದ ವಿವಾದಾಸ್ಪದ ಭೂಮಿಯಲ್ಲಿ ಮಸೀದಿ ನಿರ್ಮಿಸಬೇಕು ಎಂದು ಹೇಳುವ ಕುರಾನ್‌ನ ಪೂರ್ವ ಷರತ್ತನ್ನು ಇಲ್ಲಿ ಅನುಸರಿಸಿಲ್ಲ ಎಂದು ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

ಅರ್ಜಿಯ ಮುಂದಿನ ವಿಚಾರಣೆ ಮೇ 25 ರಂದು ನಡೆಯಲಿದೆ ಎಂದು ಜಿಲ್ಲಾ ಸರ್ಕಾರಿ ವಕೀಲ (ಸಿವಿಲ್) ಸಂಜಯ್ ಗೌರ್ ತಿಳಿಸಿದ್ದಾರೆ.

Leave a Reply

Your email address will not be published.

Back to top button