ಕೊಡವ ಲ್ಯಾಂಡ್ ಕೇಸ್‌ : ಕೇಂದ್ರ ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್‌

Public TV
2 Min Read

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಮುಖ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ (Geo-Political Autonomy for Kodava Tribe ) ಕುರಿತು ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (PIL) ವಿಚಾರಣೆ ನಡೆಸಿದ ಹೈಕೋರ್ಟ್‌ (Karnataka High Court) ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ತೋರಿದ್ದಕ್ಕೆ ಕೇಂದ್ರ ಗೃಹ ಸಚಿವಾಲಯಕ್ಕೆ (Central home Ministry) 5 ಸಾವಿರ ರೂ. ದಂಡ ವಿಧಿಸಿದೆ.

ಹೈಕೋರ್ಟ್‌ ಮುಖ್ಯ ನ್ಯಾ.ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆಯಲ್ಲಿ ಅರ್ಜಿದಾರರ ಪರ ಡಾ.ಸುಬ್ರಮಣಿಯನ್‌ ಸ್ವಾಮಿ ಹಾಗೂ ವಕೀಲ ಕೀರನ್ ನಾರಾಯಣ್ ಅವರು ವಾದ ಮಂಡಿಸಿದರು.

ನ್ಯಾಯಾಲಯದ ಮುಂದೆ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದಿದ್ದು, ಪ್ರತಿವಾದಿಗಳಲ್ಲಿ ಒಂದಾದ ಕೇಂದ್ರವು ಅರ್ಜಿಗೆ ಆಕ್ಷೇಪಿಸಲು ಹೆಚ್ಚಿನ ಸಮಯ ಬಯಸಿ ಹಲವು ಬಾರಿ ವಿಚಾರಣೆಯನ್ನು ಮುಂದೂಡುವಂತೆ ಮಾಡಿದ ಕಾರಣ ದಂಡ ವಿಧಿಸಲಾಗಿದೆ.  ಇದನ್ನೂ ಓದಿ: 10 ಜನ ಸೇರಿಕೊಂಡು ಒಬ್ಬನನ್ನು ಹೊಡೆದಿದ್ದಾರೆ ಸರ್‌: ಬಿಜೆಪಿ ನಾಯಕರ ಮುಂದೆ ಸ್ಥಳೀಯರ ಕಣ್ಣೀರು

plea to set up commission to examine demand for geo political autonomy for Kodava tribe Karnataka High Court fines Central home Ministry Rs 5000 Subramanian Swamy 1

ಮುಂದಿನ ವಿಚಾರಣೆಯನ್ನು ನವೆಂಬರ್ 29 ಕ್ಕೆ ಮುಂದೂಡಿದ್ದು, ಆಕ್ಷೇಪಣೆಯನ್ನು ಸಲ್ಲಿಸುವಂತೆಯೂ ಅದೇಶಿಸಿದೆ. ಕರ್ನಾಟಕ ರಾಜ್ಯ ಸರಕಾರ, ಕೇಂದ್ರ ಕಾನೂನು ಇಲಾಖೆ ಹಾಗೂ ಗೃಹ ಇಲಾಖೆ ಈ ಪ್ರಕರಣದಲ್ಲಿ ಪ್ರತಿವಾದಿಗಳಾಗಿವೆ.

ಕೊಡವ ಭೂ ರಾಜಕೀಯ ಸ್ವಾಯತ್ತತೆ ಸಂಬಂಧ ಆಯೋಗ ರಚಿಸುವಂತೆ ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣಿಯನ್‌ ಸ್ವಾಮಿ (Subramanian Swamy) ಅವರ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ವಿರಾಟ್ ಹಿಂದೂಸ್ಥಾನ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಶ್ರೇಯಾ ನಾಚಪ್ಪ, ಅರೆಯಡ ಗಿರೀಶ್, ಕಿರಿಯಮಾಡ ಶೆರಿನ್, ಬೇಪಡಿಯಂಡ ಬಿದ್ದಪ್ಪ, ಅಪ್ಪಾರಂಡ ಪೂವಣ್ಣ, ವಿಎಚ್‌ಎಸ್ ರಾಜ್ಯಾಧ್ಯಕ್ಷ ನಿಕುಂಜ್ ಶಾ, ಸದಸ್ಯರಾದ ನಟರಾಜ್, ರವಿಶಂಕರ್, ವಕೀಲರಾದ ಪಾರ್ಥ್, ಶ್ರೀಕಂಠ ಶರ್ಮಾ, ಮಂಜುನಾಥ್ ಅವರುಗಳು ಹಾಜರಿದ್ದರು.

 

Web Stories

Share This Article