ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತವಾಗಿ ನಿರ್ಮಾಣ ಆಗಿರುವ ‘ಪಿಎಂ ನರೇಂದ್ರ ಮೋದಿ’ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆಗೆ ತಡೆ ಕೋರಿ ವಕೀಲರೊಬ್ಬರು ರಾಜ್ಯ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ರಮೇಶ್ ನಾಯ್ಕ್ ಎಂಬುವವರಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಿನಿಮಾ ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧರಿತ ಕಥೆಯಾಗಿದೆ. ಅದ್ದರಿಂದ ಚಿತ್ರ ಬಿಡುಗಡೆ ಆಗುವುದರಿಂದ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಇದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.
Advertisement
Advertisement
ಏಪ್ರಿಲ್ 12ಕ್ಕೆ ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಚುನಾವಣೆ ಮುಗಿಯುವ ತನಕ ಬಿಡುಗಡೆಗೆ ತಡೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ವಕೀಲರ ಅರ್ಜಿ ಸದ್ಯದಲ್ಲೇ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
Advertisement
ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದು, ‘ಮೇರಿ ಕೋಮ್’, ಸರಬ್ಜಿತ್ ಸಿಂಗ್ ಜೀವನಾಧಾರಿತ ಸಿನಿಮಾಗಳನ್ನು ಯಶಸ್ವಿಯಾಗಿ ನಿರ್ದೇಶನ ಮಾಡಿದ್ದ ಒಮಂಗ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೋದಿ ಅವರ ಜೀವನದಲ್ಲಿ ನಡೆದ ಪ್ರಮುಖ ಘಟನೆಗಳೊಂದಿಗೆ ಗುಜರಾತ್ ಸಿಎಂ ಆದ ಬಳಿಕ ಮಾಡಿದ ಸಾಧನೆಗಳಿಂದ ಪ್ರಧಾನಿಯಾಗುವ ಅವಧಿಯ ಜೀವನವನ್ನು ಆಧಾರಿಸಿದೆ. ಸಿನಿಮಾದ ಪೋಸ್ಟರ್ ಒಂದನ್ನೇ 27 ಭಾಷೆಗಳಲ್ಲಿ ಚಿತ್ರತಂಡ ಬಿಡುಗಡೆ ಮಾಡಿತ್ತು.