ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದೆ. ಎರಡು ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣವನ್ನು ಮಾಡಿದ್ದಾರೆ. ರಾಜ್ಯಪಾಲರನ್ನು ವಿಧಾನ ಸಭೆಗೆ ಸ್ಪೀಕರ್ ಕರೆತರೋದು ಮತ್ತು ಕಳುಹಿಸಿ ಕೊಡುವುದು ಸಂಪ್ರದಾಯ. ಆದರೆ ರಾಜ್ಯಪಾಲರ ನಿರ್ಗಮನ ವೇಳೆ ಈ ಶಿಷ್ಟಾಚಾರ ಉಲ್ಲಂಘನೆ ಆಗಿತ್ತು.
ರಾಜ್ಯಪಾಲ ವಜೂಭಾಯಿ ವಾಲಾ ತಮ್ಮ ಭಾಷಣ ಮುಗಿಸಿ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದರು. ಈ ವೇಳೆ ರಾಜ್ಯಪಾಲರ ಹಿಂದೆ ವಿಧಾನ ಪರಿಷತ್ ಹಂಗಾಮಿ ಸ್ಪೀಕರ್ ಬಸವರಾಜ ಹೊರಟ್ಟಿ ನಡೆದುಕೊಂಡು ಬರುತ್ತಿದ್ದರು. ಕೂಡಲೇ ಎಚ್ಚೆತ್ತ ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಮುಂದೆ ನಡೆದು ಹೋಗುತ್ತಿದ್ದ ಹೊರಟ್ಟಿಯವರ ಬೆನ್ನು ತಟ್ಟಿ ಪಕ್ಕಕ್ಕೆ ತೆರಳಲು ಸೂಚಿಸಿದ್ದಾರೆ. ಈ ವೇಳೆ ಹೊರಟ್ಟಿಯವರ ಪಕ್ಕದಲ್ಲಿದ್ದ ಸಿಎಂ ಸಹ ನನ್ನ ಕಡೆ ಬನ್ನಿ ಅಂತಾ ಸನ್ನೆ ಮಾಡಿದರು.
Advertisement
Advertisement
ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ನಾಡಿನ ಕೃಷಿಕ ಬಂಧುಗಳು ಸಮಸ್ಯೆಗಳು ಬಗೆಹರಿಯಲಿವೆ. ಯಾವ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು ಎಂದು ಮನವಿ ಮಾಡಿಕೊಂಡರು. ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದು ತಿಳಿಸಿದರು.
Advertisement
Advertisement