ಬೆಂಗಳೂರು: ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ (Pratap Simha) ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ (BJP Activists) ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದಿದ್ದಾರೆ.
Advertisement
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. 1/2
— Pratap Simha (@mepratap) May 18, 2023
Advertisement
ಅಲ್ಲದೇ ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಸಂಸದರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಒಂದೇ ಡಿಸಿಎಂ – ಎಐಸಿಸಿ ಅಧಿಕೃತ ಘೋಷಣೆ
Advertisement
ಹಾಗೂ…
ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ. 2/2
— Pratap Simha (@mepratap) May 18, 2023
Advertisement
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿದೆ. ಆ ಬಳಿಕದಿಂದ ಸಿಎಂ ಕುರ್ಚಿಗಾಗಿ ಭಾರೀ ಪೈಪೋಟಿ ನಡೆದಿದ್ದು, ಇದೀಗ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕುರ್ಚಿ ಕದನ ಅಂತ್ಯವಾಗಿದೆ.