Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Latest

ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Public TV
Last updated: February 4, 2026 8:09 pm
Public TV
Share
2 Min Read
HD Devegowda
SHARE

– ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ.ದೇವೇಗೌಡ

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು (H.D.Deve Gowda), ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ರಾಜ್ಯಸಭೆಯಲ್ಲಿ (Rajya Sabha) ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ಇದನ್ನೂ ಓದಿ: ಆಡಳಿತ-ವಿಪಕ್ಷಗಳ ಪ್ರತಿಷ್ಠೆಗೆ ಬಲಿಯಾದ ವಿಧಾನ ಪರಿಷತ್ ಕಲಾಪ

ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿಸಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು. ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದರು.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ದೇವೇಗೌಡರು ಕೋರಿಕೊಂಡರು. ಇದನ್ನೂ ಓದಿ: ರಾಜ್ಯಕ್ಕೆ ಇನ್ನೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನು ಭೇಟಿಯಾದ ಹೆಚ್‌ಡಿಕೆ

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

TAGGED:H.D.Deve GowdaNew Delhirajya sabhaನವದೆಹಲಿರಾಜ್ಯಸಭಾಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
22 seconds ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
30 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
36 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
50 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?