ಮಂಗಳೂರು: ಬಿಹಾರದಲ್ಲಿ (Bihar) ಪ್ರಧಾನಿ ಮೋದಿ (Narendra Modi) ದಾಳಿಗೆ ಸಂಚು ಪ್ರಕರಣದಲ್ಲಿ ಎನ್‌ಐಎ (NIA) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಕಡೆ ದಾಳಿ ನಡೆಸಿದ್ದಾರೆ.
ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್‌ಐ (PFI) ಹವಾಲ ಹಣದ ಜಾಲವನ್ನು ಎನ್‌ಐಎ ಭೇದಿಸುತ್ತಿದೆ. ಅಲ್ಲದೇ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ನೆಟ್ವರ್ಕ್ ಪತ್ತೆಯಾಗಿದೆ. ಈ ಬಗ್ಗೆ ಪತ್ತೆಹಚ್ಚುವ ಸಲುವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಸಂಚಾರ ಭಾಗ್ಯ ಫಿಕ್ಸ್ – ಸಾರಿಗೆ ಇಲಾಖೆ ಲೆಕ್ಕಾಚಾರ ಏನು?
ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಿನಲ್ಲಿ ಪುಲ್ವಾರಿ ಶರೀಫ್ ಪ್ರಕರಣ ಪತ್ತೆಯಾಗಿತ್ತು. ಈತ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು, ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಯ ಜಾಡು ಹಿಡಿದು ಎನ್‌ಐಎ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡದ ಪುತ್ತೂರು ಮತ್ತು ಬಂಟ್ವಾಳದಲ್ಲಿ ದಾಳಿ ನಡೆಸಿತ್ತು. ಇದನ್ನೂ ಓದಿ: ಕೆಜಿಎಫ್‌ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ
ದಾಳಿ ನಡೆಸಿದ ಸಂದರ್ಭ ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬವರನ್ನು ಬಂಧಿಸಲಾಗಿತ್ತು. ಅಲ್ಲದೇ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ಎನ್‌ಐಎ ತಂಡವು ದಾಖಲೆ ಪತ್ತೆಹಚ್ಚಿತ್ತು. ಇದನ್ನೂ ಓದಿ: ಕೂದಲು ಹಿಡಿದು ತಲಾಖ್ ಕೊಟ್ಟ, ಹೋಗಿ ಸಾಯಿ ಎಂದ: ಕಣ್ಣೀರಿಟ್ಟ ಮಂಗಳೂರಿನ ಮಹಿಳೆ