ಫರಿದಾಬಾದ್: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ (Ram Mandir) ಮೇಲೆ ಹ್ಯಾಂಡ್ ಗ್ರೆನೇಡ್ (Hand Grenade) ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಯಾಣದ (Haryana) ಫರಿದಾಬಾದ್‌ನಲ್ಲಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಫೈಜಾಬಾದ್ ಮೂಲದ ಅಬ್ದುಲ್ ರೆಹಮಾನ್, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಕಾರಣ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ಬಹಿರಂಗವಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ
ರಾಮಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ಬಳಸಿ ದಾಳಿ ಮಾಡಿ ಭಾರಿ ವಿನಾಶವನ್ನುಂಟುಮಾಡುವುದು ಅಬ್ದುಲ್ ರೆಹಮಾನ್ ಸಂಚಾಗಿತ್ತು. ಪಿತೂರಿಯ ಭಾಗವಾಗಿ, ಅಬ್ದುಲ್ ಹಲವು ಬಾರಿ ರಾಮ ಮಂದಿರದ ಪರಿಶೀಲನೆ ನಡೆಸಿದ್ದ ಮತ್ತು ಎಲ್ಲಾ ಮಾಹಿತಿಯನ್ನು ಪಾಕಿಸ್ತಾನದ ಐಎಸ್‌ಐ ಜೊತೆ ಹಂಚಿಕೊಂಡಿದ್ದ. ಇದನ್ನೂ ಓದಿ: ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ – ಜನಸಂಖ್ಯೆ ಹೆಚ್ಚಿಸಲು ಎಂ.ಕೆ ಸ್ಟಾಲಿನ್ ಮನವಿ
ಅಬ್ದುಲ್ ಫೈಜಾಬಾದ್‌ನಿಂದ ರೈಲಿನಲ್ಲಿ ಫರಿದಾಬಾದ್ ತಲುಪಿದ್ದ. ಅಲ್ಲಿ ವ್ಯಕ್ತಿಯೊಬ್ಬ ಹ್ಯಾಂಡ್ ಗ್ರೆನೇಡ್‌ಗಳನ್ನು ನೀಡಿದ್ದ. ಅದನ್ನು ತೆಗೆದುಕೊಂಡು ರೈಲಿನಲ್ಲಿ ಅಯೋಧ್ಯೆಗೆ ತೆರಳಿ ದಾಳಿ ಮಾಡುವ ಉದ್ದೇಶ ಹೊಂದಲಾಗಿತ್ತು. ಆದರೆ ಕೇಂದ್ರ ಸಂಸ್ಥೆಗಳ ಮಾಹಿತಿಯ ಆಧಾರದ ಮೇಲೆ ಯೋಜನೆ ಯಶಸ್ವಿಯಾಗುವ ಮೊದಲು, ಗುಜರಾತ್ ಎಟಿಎಸ್ ಮತ್ತು ಫರಿದಾಬಾದ್ ಎಸ್‌ಟಿಎಫ್ ಶಂಕಿತ ಭಯೋತ್ಪಾದಕನನ್ನು ಬಂಧಿಸಿದೆ. ಇದನ್ನೂ ಓದಿ: ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಯಾವುದೇ ಅನುದಾನ ತಂದಿಲ್ಲ: ಹೆಚ್‌ಸಿ ಬಾಲಕೃಷ್ಣ