ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ

Public TV
1 Min Read
Prabhu Chauhan Bhagwanth Khuba

ಬೀದರ್: ಭಗವಂತ ಖೂಬಾ (Bhagwanth Khuba) ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ಗಂಭೀರ ಆರೋಪ ಮಾಡಿದ್ದಾರೆ.

Prabhu Chauhan

ಔರಾದ್ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದು ಬಿಜೆಪಿ ಮಾಜಿ ಸಚಿವ, ಔರಾದ ಶಾಸಕ ಮತ್ತು ಕೇಂದ್ರ ಸಚಿವ ಖೂಬಾ ಮಧ್ಯೆ ಬಹಿರಂಗ ವಾಗ್ಯುದ್ಧ ಮುಂದುವರಿದಿದೆ. ಇದನ್ನೂ ಓದಿ: ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

ಇತ್ತೀಚೆಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಚವ್ಹಾಣ್ ವಿರುದ್ಧ ವಾಕ್ಸಮರ ನಡೆಸಿದ ಖೂಬಾಗೆ ಔರಾದ್‌ನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯಲ್ಲಿ ಖೂಬಾ ವಿರುದ್ಧ ಚವ್ಹಾಣ್ ಕಿಡಿಕಾರಿ ಇಡೀ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನನಗೆ ಕೊಲೆ ಮಾಡಿ 6 ತಿಂಗಳಲ್ಲಿ ಉಪಚುನಾವಣೆಗೆ ಕುತಂತ್ರ ನಡೆಸಲಾಗುತ್ತಿದೆ. ರಸ್ತೆ ಮಧ್ಯೆ ನನಗೆ ಗುಂಡು ಹಾರಿಸಿ ಕೊಲೆ ಮಾಡಿಸಲು ಸಂಚು ರೂಪಿಸಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ ಬೆಂಬಲಿಗರಿಂದ ಇದು ಗೊತ್ತಾಗಿದೆ ಎಂದು ಚವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದಲೇ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿದೆ: ನಿರ್ಮಲಾ ಸೀತಾರಾಮನ್

Web Stories

Share This Article