ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ (Terrorist Attack )ಬಗ್ಗೆ ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಉಗ್ರರ ದಾಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸ್ಥಳಕ್ಕೆ ಭೇಟಿ ನೀಡುವಂತೆ ಅವರು ಅಮಿತ್ ಶಾ ಅವರಿಗೆ ಸೂಚಿಸಿದರು. ಪ್ರಧಾನಿ ಸೂಚನೆಯಂತೆ ಅಮಿತ್ ಶಾ ಅವರು ಘಟನಾ ಸ್ಥಳಕ್ಕೆ ಹೊರಟಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ
#WATCH | Terrorist attack on tourists reported in Jammu & Kashmir’s Pahalgam; Security Forces mobilised. Further details awaited.
(Visuals deferred by unspecified time) pic.twitter.com/z8g7rQeiUD
— ANI (@ANI) April 22, 2025
ಅಮಿತ್ ಶಾ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಈ ಬಗ್ಗೆ ಸಭೆ ಕರೆದಿದ್ದರು. ಸಭೆಯಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಅಲ್ಲದೇ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ಮತ್ತು ವೈದ್ಯಕೀಯ ತಂಡಗಳು ದಾಳಿ ನಡೆದ ಪ್ರದೇಶಕ್ಕೆ ತೆರಳಿವೆ.
ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ ಇತರ 12 ಜನ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದರು.
ಈ ವರ್ಷದ ಅಮರನಾಥ ಯಾತ್ರೆಗೆ ದೇಶಾದ್ಯಂತ ನೋಂದಣಿ ನಡೆಯುತ್ತಿರುವಾಗ ಈ ದಾಳಿ ನಡೆದಿದೆ. 38 ದಿನಗಳ ತೀರ್ಥಯಾತ್ರೆ ಜುಲೈ 3 ರಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗಲಿದೆ.