ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆಟೋಮೊಬೈಲ್ (Automobile) ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.
ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಹೊನ್ನಾವರದಲ್ಲಿ ಯಕ್ಷಗಾನದ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ ನಟಿ ಉಮಾಶ್ರೀ
Advertisement
Clean transportation is key to India’s net-zero goals. Under the visionary leadership of Hon’ble PM Shri @narendramodi avaru’s, initiatives like PM E-Drive & renewable energy targets are paving the way for a greener, cleaner future. Together, we’re building #ViksitBharat2047.… pic.twitter.com/o8sha0oexL
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 17, 2025
Advertisement
ವಾಯುಮಾಲಿನ್ಯ ನಿವಾರಣೆ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಹಸಿರುಪೂರಕ ಉಪಕ್ರಮಗಳಿಂದ ದೇಶೀಯ ಎಕೋ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಅನುಕೂಲ ಆಗಿದೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು), ಶುದ್ಧ ಇಂಧನ ಪರಿಹಾರಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಪರಿಸರ ಸ್ನೇಹಿ ಸಾರಿಗೆಯಲ್ಲಿ ಭಾರತವು ನಾಗಲೋಟದಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ
Advertisement
ಸ್ವಚ್ಛ ಭಾರತ್ ಅಭಿಯಾನವೂ ಸೇರಿದಂತೆ ಪ್ರಧಾನಮಂತ್ರಿಗಳ ಪರಿಸರ ಸ್ನೇಹಿ ನೀತಿಗಳು ಭಾರತದ ಹಸಿರು ಆಟೋಮೊಬೈಲ್ ಭವಿಷ್ಯಕ್ಕೆ ಖಾತರಿಯಾಗಿವೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಈ ಕ್ಷೇತ್ರವು ಪರಿಣಾಮಕಾರಿಯಾಗಿ ವಾಯುಮಾಲಿನ್ಯ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಆನ್‌ಲೈನ್ ಗೇಮ್‌ನಲ್ಲಿ 20 ಸಾವಿರ ರೂ. ನಷ್ಟ – ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ
Advertisement
ಹಸಿರು ಆಟೋಮೊಬೈಲ್ ಕ್ಷೇತ್ರದ ಪ್ರಯೋಗಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪಿಎಂ ಇ-ಡ್ರೈವ್ ಯೋಜನೆ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯದಿಂದ (ಪಿಎಲ್‌ಐ) ಹೆಚ್ಚು ಅನುಕೂಲ ಆಗಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಓಂ ಶಕ್ತಿ ಮಾಲೆ ಧರಿಸಿದ್ದ ಪ್ರಿಯತಮೆಗೆ ಪೂಜಾ ಸಾಮಾಗ್ರಿ ಕೊಡಿಸಲು ಕಳ್ಳತನ
India’s automobile industry is driving change, contributing 7% to GDP & employing 3.7 crore people. With visionary initiatives like PLI, FAME, & PM E-Drive under Hon’ble PM Shri @narendramodi avaru’s leadership, we’re steering towards a sustainable, self-reliant future.… https://t.co/3Kzwf6HN4H
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 17, 2025
ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಖಾತೆ ಸಚಿವರಾದ ಜಿತನ್ ರಾಮ್ ಮಾಂಝ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಸಿಐಡಿ ತನಿಖೆಯಲ್ಲಿ ನನಗೆ ವಿಶ್ವಾಸ ಇಲ್ಲ: ಸಿ.ಟಿ ರವಿ
ಸುಧಾರಿತ ಆಟೋಮೋಟಿವ್ ಟೆಕ್ನಾಲಜಿ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಪಿಎಲ್‌ಐ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಎಲೆಕ್ಟ್ರಿಕ್ ಅಂಬುಲೆನ್ಸ್ಗಳು, ಬಸ್‌ಗಳು, ಟ್ರಕ್‌ಗಳು ಮತ್ತು ಮೂಲಸೌಕರ್ಯಗಳನ್ನು ಉತ್ತೇಜಿಸುವ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಿಂದ ಇದೆಲ್ಲಾ ಸಾಧ್ಯವಾಗಿದೆ ಎಂದರು. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು
ಭಾರತದ ಆಟೋಮೊಬೈಲ್ ಉದ್ಯಮವು ಈಗಾಗಲೇ ಜಾಗತಿಕವಾಗಿ 3ನೇ ಅತಿ ದೊಡ್ಡ ಉದ್ಯಮವಾಗಿ ಬೆಳೆದಿದೆ. ಸುಧಾರಿತ ವಾಹನ ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ ಅಡಿಯಲ್ಲಿ ನಾವು ದೇಶೀಯ ಸ್ವಾವಲಂಬನೆಯತ್ತ ಮುನ್ನಡೆಯುತ್ತಿದ್ದೇವೆ. ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ರಫ್ತುದಾರರಾಗಿ ಹೊರಹೊಮ್ಮುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ಬಸ್ ಆಯ್ತು, ಈಗ ಮೆಟ್ರೋ ದರ ಏರಿಕೆ – ನಾಳೆಯೇ ಅಧಿಕೃತ ಘೋಷಣೆ
ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯಲ್ಲಿ ಭಾರತ ವೇಗವಾಗಿ ದಾಪುಗಾಲು ಇಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭಾರತವನ್ನು ನಿರ್ಮಿಸುತ್ತಿದ್ದೇವೆ. ನಾವು ಪರಿಸರಪೂರಕ ಉಪಕ್ರಮಗಳನ್ನು ಬೆಂಬಲಿಸೋಣ ಮತ್ತು ಸ್ವಚ್ಛವಾದ, ಹಸಿರು ಭೂಮಿಯನ್ನು ಖಚಿತಪಡಿಸಿಕೊಳ್ಳೋಣ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಸಿಎಂ ಮಂಗ್ಳೂರಿನಲ್ಲಿ ಇರುವಾಗಲೇ ಬ್ಯಾಂಕ್ ಲೂಟಿ – ಬಂದೂಕು ತೋರಿಸಿ ದರೋಡೆ