ಸವಾಲುಗಳ ನಡುವೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ

Public TV
2 Min Read
MODI VISIT EUROP

ನವದೆಹಲಿ: ಮೂರು ರಾಷ್ಟ್ರಗಳ ನಿರ್ಣಾಯಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರಮೋದಿ ಅವರು, ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ, ಸಮೃದ್ಧಿಗಾಗಿ ಸಹಕಾರದ ಮನೋಭಾವ ಬಲಪಡಿಸಲು ಹಾಗೂ ಕೋವಿಡ್ ಆರ್ಥಿಕ ಚೇತರಿಕೆಯನ್ನು ಬಲಪಡಿಸಲು ಬರ್ಲಿನ್, ಕೋಪನ್ ಹೇಗನ್ ಮತ್ತು ಪ್ಯಾರಿಸ್ ಪ್ರವಾಸಕ್ಕೆ ತೆರಳುತ್ತಿದ್ದಾರೆ.

MODI VISIT EUROP

ಅವರಿಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ಇದರೊಂದಿಗೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್‌ನಲ್ಲಿ ಹೋಗುವುದೆಂದರೆ ನನಗೆ ಭಯ: ಅಜಯ್ ದೇವಗನ್

ಪ್ರವಾಸಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದಿದ್ದಾರೆ ಎಂದು ಹೇಳಿದೆ.

ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳು ನಮ್ಮ ಕಾರ್ಯತಂತ್ರದ ಸಹಭಾಗಿತ್ವದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ. 2021ಕ್ಕೆ ಭಾರತ ಮತ್ತು ಜರ್ಮನಿ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಗೆ 70 ವರ್ಷ ಕಳೆದಿದೆ. ಚಾನ್ಸೆಲರ್ ಸ್ಕೋಲ್ಜ್ ಮತ್ತು ನಾನು ಜಂಟಿಯಾಗಿ ನಮ್ಮ ಉದ್ಯಮ ಉತ್ತೇಜಿಸುವ ಗುರಿ ಹೊಂದಿದ್ದು, ಜಾಗತಿಕ ಬೆಳವಣಿಗಳ ಬಗ್ಗೆ ಚರ್ಚಿಸಲಿದ್ದೇವೆ. ಇದರಿಂದ ಎರಡೂ ದೇಶಗಳಲ್ಲಿ ಕೋವಿಡ್ ಆರ್ಥಿಕ ಚೇತರಿಕೆ ಬಲಪಡಿಸಲು ಸಹಾಯ ಮಾಡುತ್ತದೆ. ಬರ್ಲಿನ್‌ಗೆ ನನ್ನ ಭೇಟಿಯು ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ವಿವರವಾದ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲು ಒಂದು ಅವಕಾಶವಾಗಿದೆ. ಇದೇ ವೇಳೆ ಉಕ್ರೇನ್ ಯುದ್ಧದ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ ಮತ್ತು ಜರ್ಮನಿಯು ಈ ಸಂಖ್ಯೆಯಲ್ಲಿ ಗಮನಾರ್ಹ ಪ್ರಮಾಣವನ್ನು ಹೊಂದಿದೆ. ಯುರೋಪ್‌ನೊಂದಿಗಿನ ನಮ್ಮ ಸಂಬಂಧಗಳಲ್ಲಿ ಪ್ರಮುಖ ಆಧಾರವಾಗಿದೆ ಮತ್ತು ಆದ್ದರಿಂದ ನಾನು ನನ್ನ ಭೇಟಿಯ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಅಲ್ಲಿ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು 2022ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಪ್ರವಾಸವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *