ನವದೆಹಲಿ: ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು ಮತ್ತು ಕೀಟನಾಶಕಗಳ ಸಿಂಪಡಣೆಗಾಗಿ ಬಳಕೆ ಮಾಡುವ ಉದ್ದೇಶದಿಂದ 100 ʼಕಿಸಾನ್ ಡ್ರೋನ್ʼಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ಡ್ರೋನ್ ವಲಯದಲ್ಲಿ ಹೆಚ್ಚುತ್ತಿರುವ ಭಾರತದ ಸಾಮರ್ಥ್ಯವು ಜಗತ್ತಿಗೆ ಹೊಸ ನಾಯಕತ್ವವನ್ನು ನೀಡುತ್ತದೆ. ಇದು ರೈತರಿಗೆ ಅತ್ಯಂತ ನವೀನ ಮತ್ತು ಉತ್ತೇಜಕ ಉಪಕ್ರಮವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ
Advertisement
Advertisement
ಭಾರತದಲ್ಲಿ ಡ್ರೋನ್ ಸ್ಟಾರ್ಟ್‌ಅಪ್‌ಗಳ ಹೊಸ ಸಂಸ್ಕೃತಿ ಸಿದ್ಧವಾಗುತ್ತಿದೆ. ಈ ಸಂಖ್ಯೆ ಈಗ 200ಕ್ಕಿಂತ ಬೃಹತ್ ಪ್ರಮಾಣದಲ್ಲಿದ್ದು, ಉದ್ಯೋಗಾವಕಾಶಗಳ ಉತ್ಪಾದನೆಗೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರ.
Advertisement
ನೀತಿಯು ಸರಿಯಾಗಿದ್ದರೆ ದೇಶವು ಎಷ್ಟು ಬೆಳೆಯಬಲ್ಲದು ಎಂಬುದಕ್ಕೆ ಉದಾಹರಣೆಯಾಗಿದೆ. ಕೆಲವು ವರ್ಷಗಳ ಹಿಂದೆ ಡ್ರೋನ್‌ಗಳು ಹೆಚ್ಚಾಗಿ ರಕ್ಷಣಾ ಕ್ಷೇತ್ರದೊಂದಿಗೆ ಸಂಬಂಧ ಹೊಂದಿದ್ದವು. ಈಗ ಅದು ಬದಲಾಗಿದೆ ಎಂದು ಮೋದಿ ಬಣ್ಣಿಸಿದ್ದಾರೆ.
Advertisement
21ನೇ ಶತಮಾನದಲ್ಲಿ ಆಧುನಿಕ ಕೃಷಿ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇದೊಂದು ಹೊಸ ಅಧ್ಯಾಯವಾಗಿದ್ದು, ಡ್ರೋನ್ ವಲಯದ ಅಭಿವೃದ್ಧಿಯಲ್ಲಿ ಮೈಲುಗಲ್ಲಾಗಿದೆ. ಡ್ರೋನ್ ವಲಯವನ್ನು ತೆರೆಯುವ ಬಗ್ಗೆ ನಮ್ಮ ಸರ್ಕಾರವು ಆತಂಕಗಳಗೆ ಸಮಯ ವ್ಯರ್ಥಮಾಡಲಿಲ್ಲ. ನಮ್ಮ ಸರ್ಕಾರ ಬಜೆಟ್ ಮತ್ತು ನೀತಿ ಕ್ರಮಗಳಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರಗಳಿಗೆ ಆದ್ಯತೆ ನೀಡಿದೆ ವಿವರಿಸಿದ್ದಾರೆ. ಇದನ್ನೂ ಓದಿ: ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲು
ಕಿಸಾನ್ ಡ್ರೋನ್‌ಗಳು ಹೊಸ ಕ್ರಾಂತಿಗೆ ನಾಂದಿ ಹಾಡಿವೆ. ರೈತರು ತಮ್ಮ ಉತ್ಪನ್ನಗಳಾದ ಉತ್ಪನ್ನಗಳಾದ ಹಣ್ಣುಗಳು, ತರಕಾರಿಗಳು ಮತ್ತು ಹೂವುಗಳನ್ನು ಕಡಿಮೆ ಸಮಯದಲ್ಲಿ ಮಾರುಕಟ್ಟೆಗಳಿಗೆ ಆಗಿಸುವ ಮುಂಬರುವ ದಿನಗಳಲ್ಲಿ ಹೆಚ್ಚಿನ ಸಾಮರ್ಥ್ಯದ ಡ್ರೋನ್‌ಗಳನ್ನು ಬಳಸಬಹುದು. ಇದರಿಂದ ಆದಾಯವೂ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2022ರಲ್ಲಿ ಕಿಸಾನ್ ಡ್ರೋನ್ ಬಳಕೆ ಬಗ್ಗೆ ತಿಳಿಸಲಾಗಿತ್ತು. ‘ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗಾಗಿ ಕಿಸಾನ್ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುವ ನಿರೀಕ್ಷೆ ಇದೆ’ ಎಂದು ಅವರು ಬಜೆಟ್ ಭಾಷಣದ ವೇಳೆ ತಿಳಿಸಿದ್ದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ