ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ.@DKShivakumar
— Narendra Modi (@narendramodi) June 3, 2026
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.
ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.@DKShivakumar
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 3, 2026
ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನ ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇದನ್ನೂ ಓದಿ: ಡಿಕೆಶಿ ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಡಾ. ಯತೀಂದ್ರ ಪ್ರಮಾಣ ಸ್ವೀಕಾರ
ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.

