ಗಾನಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu) ಅವರು ಎಕ್ಸ್ (X) ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ (PM Modi) ಮೋದಿ ತಮ್ಮ ಎಕ್ಷ್(x) ಪೋಸ್ಟ್‌ನಲ್ಲಿ, ʼಎಸ್. ಜಾನಕಿ ಅಮ್ಮ ಅವರ ನಿಧನ ಸಂಗೀತ ಮತ್ತು ಸಂಸ್ಕೃತಿ ಲೋಕಕ್ಕೆ ತುಂಬಲಾರದ ನಷ್ಟ. ಹಲವು ಭಾಷೆಗಳಲ್ಲಿ ಅವರು ಹಾಡಿದ ಗೀತೆಗಳು ತಲೆಮಾರುಗಳ ಮನಸ್ಸು ಗೆದ್ದಿವೆ. ಪ್ರತಿಯೊಂದು ಭಾವನೆಗೂ ತಮ್ಮ ಧ್ವನಿಯ ಮೂಲಕ ಜೀವ ತುಂಬಿದ್ದರು. ಅವರ ಹಾಡುಗಳು ಮುಂದಿನ ಪೀಳಿಗೆಯನ್ನೂ ಮೋಡಿ ಮಾಡುತ್ತಲೇ ಇರುತ್ತವೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸಂಗೀತ ಲೋಕದ ಎಲ್ಲರಿಗೂ ನನ್ನ ಸಂತಾಪ. ಓಂ ಶಾಂತಿʼ ಎಂದು ಬರೆದಿದ್ದಾರೆ.
PM Narendra Modi has condoled the passing of legendary playback singer S. Janaki Amma, calling her demise an “irreparable loss to the world of music and culture”.
In his tweet, he wrote, “The passing of the distinguished playback singer S. Janaki Amma is an irreparable loss to… pic.twitter.com/UQPwyIcwNb
— ANI (@ANI) July 12, 2026
ರಾಷ್ಟ್ರಪತಿ ದ್ರೌಪದಿ ಮುರ್ಮು, ಜಾನಕಿ ಅಮ್ಮ ಅವರ ಅಗಲಿಕೆಯಿಂದ ಭಾರತ ಸಂಗೀತ ಲೋಕದ ಅಮೂಲ್ಯ ಧ್ವನಿಯನ್ನು ಕಳೆದುಕೊಂಡಿದೆ ಎಂದು ಬಣ್ಣಿಸಿದ್ದಾರೆ. ʼಆರು ದಶಕಗಳಿಗೂ ಹೆಚ್ಚು ಕಾಲದ ಸಂಗೀತ ಪಯಣದಲ್ಲಿ ಸುಮಾರು 20 ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರ ಅಮೋಘ ಗಾಯನ ಹಲವು ತಲೆಮಾರುಗಳನ್ನು ರಂಜಿಸಿದೆ. ಅವರ ಸಂಗೀತ ಎಂದೆಂದಿಗೂ ಅಮೂಲ್ಯವಾಗಿ ಉಳಿಯಲಿದೆ. ಅವರ ಕುಟುಂಬ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನನ್ನ ಸಂತಾಪʼ ಎಂದು ಪೋಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಜಾನಕಿ ಅಮ್ಮನ ಸ್ಮಾರಕ ನಿರ್ಮಾಣಕ್ಕೆ ಹಂಸಲೇಖ ಮನವಿ
ಜಾನಕಿ ಅಮ್ಮ ಅವರ ನಿಧನಕ್ಕೆ ದೇಶದ ಗಣ್ಯರು, ಸಂಗೀತ ಕ್ಷೇತ್ರದವರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಅವರ ಧ್ವನಿ ಸದಾ ಸಂಗೀತ ಪ್ರೇಮಿಗಳ ಹೃದಯದಲ್ಲಿ ಜೀವಂತವಾಗಿರಲಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.ಇದನ್ನೂ ಓದಿ: ಶಿವ ಶಿವ ಎನ್ನದ ನಾಲಿಗೆ ಏಕೆ.. 100 ರೂ. ಹರಕೆ ಹೊತ್ತು ಹಾಡಿದ್ದ ಜಾನಕಿ