ನವದೆಹಲಿ: ಶಿಕ್ಷಣ ಸುಧಾರಣೆಗಾಗಿ ನಂದನ್ ನಿಲೇಕಣಿ (Nandan Nilekani) ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬಳಿಕ ಪ್ರಧಾನಿ ಮೋದಿ 3ನೇ ವೀಡಿಯೋ ಹಂಚಿಕೊಂಡಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆಯು ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಹೇಗೆ ಸುಧಾರಿಸುವುದು ಎಂಬುದನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿಯನ್ನು ನೀಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: NEET ಪರೀಕ್ಷೆ ವಿಚಾರದಲ್ಲಿ ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ: ಸುಧಾಕರ್ ವಾಗ್ದಾಳಿ
ಆ ವರದಿಯ ಆಧಾರದ ಮೇಲೆ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಡಲಾಗುವುದು ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.
HIGH POWERED TASK FORCE on examination reforms under the leadership of Shri Nandan Nilekani constituted.@NandanNilekani pic.twitter.com/mMpmPdIEL5
— Narendra Modi (@narendramodi) July 26, 2026
ಸ್ನೇಹಿತರೇ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರು ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ನಾವು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿದ್ದೇವೆ. ನಾಳೆ ಸಂಸತ್ತಿನಲ್ಲಿಯೂ ಸಹ, ಕಠಿಣ ಕಾನೂನು ನಿಬಂಧನೆಗಳೊಂದಿಗೆ ಹೊಸ ಕಾನೂನನ್ನು ರೂಪಿಸುವ ದಿಕ್ಕಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ ಮೋದಿ ತಿಳಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಕೊನೆಗೊಳಿಸಿದೆ. ಅದಾದ ಒಂದು ದಿನದ ನಂತರ ಈ ಪ್ರಕಟಣೆ ಬಂದಿದೆ. ಇದನ್ನೂ ಓದಿ: ಚುನಾವಣೆ ಮುಗಿದ ಮೇಲೆ ಅಳುವುದಕ್ಕಿಂತ ಈಗಲೇ ಮಾತುಕತೆ ನಡೆಸಿ – ಎಸ್‌ಪಿ ಜೊತೆ ಮೈತ್ರಿಗೆ ಓವೈಸಿ ಆಫರ್
ಆದರೆ, ನಾವು ಭವಿಷ್ಯಕ್ಕಾಗಿ ಯೋಚಿಸಬೇಕು. ನಮ್ಮ ಪರೀಕ್ಷಾ ವ್ಯವಸ್ಥೆಯು ವಿಶ್ವಾಸಾರ್ಹವಾಗಿರಬೇಕು. ನಮ್ಮ ಪರೀಕ್ಷಾ ವ್ಯವಸ್ಥೆಯು ಪಾರದರ್ಶಕವಾಗಿರಬೇಕು ಮತ್ತು ನಮ್ಮ ಪರೀಕ್ಷಾ ವ್ಯವಸ್ಥೆಯು ಈಗ ತಂತ್ರಜ್ಞಾನದ ಗರಿಷ್ಠ ಬಳಕೆಯನ್ನು ಹೊಂದಿರಬೇಕು ಎಂದು ಮೋದಿ ಹೇಳಿದ್ದಾರೆ.
ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಶ್ವಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲು ನಿರ್ಧರಿಸಲಾಗಿದೆ. ಇದು ಪರೀಕ್ಷಾ ಸುಧಾರಣೆಯ ಮೇಲೆ ಕೇಂದ್ರೀಕರಿಸುತ್ತದೆ. ಸಾಧ್ಯವಾದಷ್ಟು ಬೇಗ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಅದರ ವರದಿಯ ಆಧಾರದ ಮೇಲೆ ಮಾಡಲಾಗುವುದು ಎಂದಿದ್ದಾರೆ.
