ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ವಿಷಯಗಳ ಕುರಿತು ಒಂದು ವಾರದ ಅವಧಿಯಲ್ಲಿ ನಾಲ್ಕನೇ ಬಾರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಹಂಚಿಕೊಂಡಿದ್ದಾರೆ.
4ನೇ ಇನ್‌ಸ್ಟಾ ವೀಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ.
View this post on Instagram
ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷೆಯನ್ನು ಹೆಚ್ಚಿಸಲು ಮತ್ತು ಅಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಹಲವಾರು ಕ್ರಮಗಳನ್ನು ಪ್ರಸ್ತಾಪಿಸುವ ಮಸೂದೆಯನ್ನು ಬುಧವಾರ ಲೋಕಸಭೆ ಅಂಗೀಕರಿಸಿತು. ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಿತು.
