– ಕೃಷ್ಣನ ಊರಿಗೆ ಬಂದಿದ್ದು ನನ್ನ ಪರಮ ಸೌಭಾಗ್ಯ
– ʻಜೈ ಶ್ರೀಕೃಷ್ಣʼ- ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ
ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ (Devotees) ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದರು.
ಉಡುಪಿ ಲಕ್ಷ ಕಂಠ ಭಗವದ್ಗೀತಾ (Bhagavad Gita) ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ʻಎಲ್ಲರಿಗೂ ನಮಸ್ಕಾರ.. ಜೈ ಶ್ರೀಕೃಷ್ಣʼ ಎನ್ನುತ್ತಾ ಕನ್ನಡದಲ್ಲೇ ಮಾತು ಆರಂಭಿಸಿದರು. ಶ್ರೀ ಕೃಷ್ಣನ ದಿವ್ಯ ದರ್ಶನದ ಸಂತುಷ್ಟಿ, ಭಗವದ್ಗೀತೆ ಮಂತ್ರದ ಆಧ್ಯಾತ್ಮಿಕ ಅನುಭೂತಿ, ಸಂತರು, ಗುರುಗಳ ಉಪಸ್ಥಿತಿ ಎಲ್ಲವೂ ಲಭಿಸಿರುವುದು ನನ್ನ ಪರಮ ಸೌಭಾಗ್ಯ. ಇದು ಇನ್ನೂ ಹೆಚ್ಚಿನ ಕೆಲಸ ಮಾಡಲು ಹಾಗೂ ಜನರ ಅಪೇಕ್ಷೆಗಳನ್ನ ಪೂರೈಸಲು ಶಕ್ತಿ ಸಿಕ್ಕಂತಾಗಿದೆ ಎಂದು ಶ್ಲಾಘಿಸಿದರು.
ಉಡುಪಿ (Udupi) ಕ್ಷೇತ್ರ ಭಕ್ತಿ ಹಾಗೂ ಸೇವೆಯ ಸಂಗಮ ಕ್ಷೇತ್ರ. ನನ್ನ ಜನ್ಮ ಗುಜರಾತ್ ನಲ್ಲಿ ಆಗಿದ್ದು. ಆದ್ರೂ ಗುಜರಾತ್ ಮತ್ತು ಉಡುಪಿಗೆ ಅವಿನಾಭಾವ ಸಂಬಂಧ ಇದೆ. ಉಡುಪಿ ಕೃಷ್ಣನ ದರ್ಶನ ಪಡೆದಿದ್ದು ಆಧ್ಯಾತ್ಮಿಕ ಖುಷಿ ಸಿಕ್ಕಂತಾಗಿದೆ. ಲಕ್ಷ ಕಂಠದ ಮೂಲಕ ಗೀತಾ ಪಠಣ ಒಂದೇ ಸ್ಥಳದಲ್ಲಿ ಒಂದೇ ವೇಳೆ ಆಗಿರೋದು ಹೊಸ ಶಕ್ತಿ ನೀಡಿದಂತಾಗಿದೆ. ಈ ಕೆಲಸ ಮಾಡಿರೋ ಸುಗುಣೇಂದ್ರ ಶ್ರೀಗಳಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರಲ್ಲದೇ ಉಡುಪಿಯು ಜನ ಸಂಘ ಹಾಗೂ ಬಿಜೆಪಿಯ ಕರ್ಮಭೂಮಿ. ಜನ ಸಂಘದಲ್ಲಿ ನಮ್ಮ ವಿ.ಎಸ್.ಆಚಾರ್ಯರನ್ನ ಆಯ್ಕೆ ಮಾಡಿದ್ದು ಉಡುಪಿಯ ಜನ. ಇದನ್ನೂ ಓದಿ: ಕೃಷ್ಣ ಮಠದಲ್ಲಿ ಮೋದಿ – ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯದ ಸಾರ ಏನು?
ಮೂರು ದಿನಗಳ ಹಿಂದೆ ನಾನು ಅಯೋಧ್ಯೆಯಲ್ಲಿದ್ದೆ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಧರ್ಮಧ್ವಜ ಸ್ಥಾಪನೆ ಆಗಿದೆ. ಅಯೋಧ್ಯೆಯಿಂದ ಉಡುಪಿಯವರೆಗೂ ರಾಮ ಭಕ್ತರು ಸಾಕ್ಷಿಯಾಗಿದ್ದಾರೆ. ಮಧ್ವಾಚಾರ್ಯರು ಭಕ್ತಿಯ ಮಾರ್ಗ ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನದಿಂದ ಆರಂಭಗೊಂಡ ಈ ಅಷ್ಟ ಮಠಗಳು ಇಂದಿಗೂ ಧರ್ಮಕಾರ್ಯದಲ್ಲಿ ತೊಡಗಿವೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: Photo Gallery | 17 ವರ್ಷಗಳ ಬಳಿಕ ಕೃಷ್ಣನೂರಿಗೆ ಮೋದಿ – ಅದ್ಧೂರಿ ರೋಡ್ ಶೋ ಝಲಕ್
ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂತ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಕೃಷ್ಣ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಯೋಜನೆಗಳನ್ನ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.



