– ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯ್ತು: ಮನು
– ಮೊದಲ ಪದಕದ ಗೆಲುವನ್ನು ದೇಶಕ್ಕೆ ಅರ್ಪಿಸಿದ ಶೂಟರ್
ಪ್ಯಾರಿಸ್: 2024ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್ ಮನು ಭಾಕರ್‌ಗೆ (Manu Bhaker) ಪ್ರಧಾನಿ ಮೋದಿ (Narendra Modi) ಅವರು ಖುದ್ದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಇದು, ಐತಿಹಾಸಿಕ ಪದಕವಾಗಿದೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics 2024) ಮೊದಲ, ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಇದು ನಂಬಲಸಾಧ್ಯವಾದ ಸಾಧನೆ ಎಂದೂ ಎಕ್ಸ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ.
Prime Minister Shri @narendramodi Ji speaks to Olympic Medalist @realmanubhaker and congratulated on her on winning India’s first Olympic Medal at #Paris2024 https://t.co/ViS32S34ag pic.twitter.com/YuhoaraHNh
— Kiren Rijiju (@KirenRijiju) July 28, 2024
Advertisement
ಅಷ್ಟೇ ಅಲ್ಲದೇ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ, ಕೇಂದ್ರ ಸಚಿವರಾದ ಅಮಿತ್ ಶಾ, ಕಿರಣ್ ರಿಜಿಜು, ಟೀಂ ಇಂಡಿಯಾ ಮುಖ್ಯಕೋಚ್ ಗೌತಮ್ ಗಂಭೀರ್, ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಮಿತಾಲಿ ರಾಜ್, ವೀರೇಂದ್ರ ಸೆಹ್ವಾಗ್, ಪಂಜಾಬ್ ಸಿಎಂ ಭಗವಂತ್ ಮಾನ್, ಉದ್ಯಮಿ ಆನಂದ್ ಮಹಿಂದ್ರಾ, ಬಾಲಿವುಡ್ ನಟ ಸುನೀಲ್ ಶೆಟ್ಟಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Advertisement
Winning this medal is a dream come true, not just for me but for everyone who has supported me. I am deeply grateful to the NRAI, SAI, Ministry of Youth Affairs & Sports, Coach Jaspal Rana sir, Haryana government and OGQ. I dedicate this victory to my country for their incredible… pic.twitter.com/hnzGjNwUhv
— Manu Bhaker🇮🇳 (@realmanubhaker) July 28, 2024
Advertisement
ಈ ಹಿಂದೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮನು ಭಾಕರ್ ಅವರಿಗೆ ಸ್ಪರ್ಧೆಯ ವೇಳೆ ಪಿಸ್ತೂಲ್ ಕೈಕೊಟ್ಟಿದ್ದ ಪರಿಣಾಮ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಪ್ರಸಕ್ತ ಟೂರ್ನಿಯಲ್ಲಿ ಫೈನಲ್ ತಲುಪುವ ಮೂಲಕ ವಿಶೇಷ ಸಾಧನೆ ಮಾಡಿದ್ದ ಮನು ಭಾಕರ್ ಭಾನುವಾರ ಪದಕ ಗೆದ್ದುಕೊಂಡಿದ್ದಾರೆ.
Advertisement
ಭಾನುವಾರ ನಡೆದ ಮಹಿಳೆಯರ ಏರ್‌ಪಿಸ್ತೂಲ್ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್ ಯೇಜಿ 241.3 ಅಂಕ ಪಡೆದರೆ, 22 ಶಾಟ್ ಗಳ ಬಳಿಕ ಮನು ಭಾಕರ್ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ.
Thank you so much @GautamGambhir sir. This means a lot 🙏 https://t.co/1r4N2d5x7F
— Manu Bhaker🇮🇳 (@realmanubhaker) July 28, 2024
ಮನು ಭಾಕರ್ ಫಸ್ಟ್ ರಿಯಾಕ್ಷನ್ ಏನು?
ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ ಬಳಿಕ ಮಾತನಾಡಿದ ಮನು ಭಾಕರ್, ನಾನು ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯಿತು ಎಂದು ಹೇಳಿದ್ದಾರೆ. ನಾನು ಸಾಕಷ್ಟು ಬಾರಿ ಭಗವದ್ಗೀತೆ ಓದಿದ್ದೇನೆ. ಅದರಲ್ಲಿ ಭಗವಂತ ಶ್ರೀಕೃಷ್ಣನು, ನಿನ್ನ ಕೆಲಸವನ್ನು ನೀನು ಮಾಡು, ಅದರಿಂದ ಬರುವ ಫಲಿತಾಂಶದ ಬಗ್ಗೆ ಆಲೋಚಿಸಬೇಡʼ ಎನ್ನುವ ಮಾತು ನನಗೆ ಸ್ಫೂರ್ತಿಯಾಯಿತು ಎಂದು ಭಾಕರ್ ಹೇಳಿದ್ದಾರೆ.
ಅಲ್ಲದೇ ಈ ಪದಕದ ಗೆಲುವು ನನಗಷ್ಟೇ ಅಲ್ಲ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರ ಕನಸು ನನಸಾಗಿದೆ. ಎನ್‌ಆರ್‌ಎಐ, ಎಸ್‌ಎಐ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ತರಬೇತುದಾರ ಜಸ್ಪಾಲ್ ರಾಣಾ ಸರ್, ಹರಿಯಾಣ ಸರ್ಕಾರ ಎಲ್ಲರಿಗೂ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಅವರ ಅಸಾಧಾರಣ ಬೆಂಬಲ ಮತ್ತು ಪ್ರೀತಿಗಾಗಿ ನನಗಿಂದು ಗೆಲುವು ಸಿಕ್ಕಿದೆ. ಈ ವಿಜಯವನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.