ವಯನಾಡು: ಇತ್ತೀಚೆಗೆ ಕೇರಳದ ವಯನಾಡಿನಲ್ಲಿ (Wayanad) ಭೂಕುಸಿತ ಸಂಭವಿಸಿದ್ದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಭೇಟಿ ನೀಡಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿರುವ ಪ್ರಧಾನಿ, ಸರ್ಕಾರ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಕುರಿತು ಪರಿಶೀಲಿಸಿದ್ದಾರೆ.
Advertisement
ಇದಕ್ಕೂ ಮುನ್ನ ಬೆಳಗ್ಗೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು, ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಸರಳ, ಸಾಂಪ್ರದಾಯಿಕವಾಗಿ ಕೈಮುಗಿದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು. ಸ್ವಾಗತ ಸ್ವೀಕರಿಸಿ ಬಳಿಕ ಮೋದಿ, ಸಿಎಂ ಜೊತೆಗೂಡಿ ವೈಮಾನಿಕ ಸಮೀಕ್ಷೆ (Aerial Survey) ನಡೆಸಿದರು. ಇದನ್ನೂ ಓದಿ: ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್ ನ್ಯೂಸ್ ಕೊಟ್ಟ ಹಿಂಡನ್‌ಬರ್ಗ್
Advertisement
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್ಮಲಾ (Chooralmala), ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಸಮೀಕ್ಷೆ ಮುಗಿದ ಬಳಿಕ ಇಲ್ಲಿನ ಕಲ್ಪೆಟ್ಟಾದ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆಗೆ ಬಂದಿಳಿಯಲಿದ್ದು, ಅಲ್ಲಿಂದ ರಸ್ತೆ ಮೂಲಕ ಭೂಕುಸಿತ ಪೀಡಿತ ಪ್ರದೇಶಗಳಿಗೆ ಮೋದಿ ತೆರಳಲಿದ್ದಾರೆ. ಇದನ್ನೂ ಓದಿ: 530 ದಿನಗಳ ಬಳಿಕ ಜೈಲಿನಿಂದ ಹೊರಬಂದ AAP ನಾಯಕ ಮನೀಶ್ ಸಿಸೋಡಿಯಾ
Advertisement
Advertisement
ಕಳೆದ ಜು.30 ರಂದು ವಯನಾಡಲ್ಲಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 226 ಜನರು ಸಾವನ್ನಪ್ಪಿದ್ದರು. ಅನೇಕರು ಈ ದುರಂತದಲ್ಲಿ ನಾಪತ್ತೆಯಾಗಿದ್ದಾರೆ. ಇದು ಕೇರಳಕ್ಕೆ ಅಪ್ಪಳಿಸಿದ ಅತಿದೊಡ್ಡ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ವಿಪತ್ತು ಪೀಡಿತ ಪ್ರದೇಶಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸಿಕೊಡಲು ಕೇರಳ ಸರ್ಕಾರ, ಕೇಂದ್ರದ ಬಳಿ 2,000 ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಿತ್ತು. ಈ ಬೆನ್ನಲ್ಲೇ ಖುದ್ದು ಪ್ರಧಾನಿ ಅವರೇ ಭೇಟಿ ನೀಡಿ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ. ಇದನ್ನೂ ಓದಿ: ಎಸ್ಸಿ-ಎಸ್ಟಿ: ಕೆನೆಪದರ ಮೀಸಲಾತಿಗೆ ನೂರಾರು ಸಂಸದರ ವಿರೋಧ